ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ

5-KGL-2
ಪಟ್ಟಣದ ಶ್ರೀ ಮಹದೇಶ್ವರ ಸರ್ಕಾರಿ ಕಾಲೇಜು ಕ್ರೀಡಾಂಗಣದಲ್ಲಿ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ಬಾಸ್ಕೆಟ್ ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಶಾಸಕ ಎ.ಆರ್.ಕೃಷ್ಣ ಮೂರ್ತಿ ಶನಿವಾರ ಚಾಲನೆ ನೀಡಿದರು. ರೇಖಾ ರಮೇಶ್, ಎ.ಪಿ.ಶಂಕರ್, ಪ್ರೋ.ಜಯಲಕ್ಷ್ಮೀ, ಸುರೇಶ್ ಇತರರು ಇದ್ದರು.
Published on

ಕೊಳ್ಳೇಗಾಲ: ಪಟ್ಟಣದ ಮಹದೇಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಅಂದಾಜು 40 ಲಕ್ಷ ರೂ. ವೆಚ್ಚದಲ್ಲಿ ಬಾಸ್ಕೆಟ್‌ಬಾಲ್ ಕ್ರೀಡಾಂಗಣ ನಿರ್ಮಾಣಕ್ಕೆ ಶಾಸಕ ಎ.ಆರ್. ಕೃಷ್ಣ ಮೂರ್ತಿ ಶನಿವಾರ ಭೂಮಿಪೂಜೆ ನಡೆಸಿದರು.

ಬಾಸ್ಕೆಟ್‌ಬಾಲ್ ಕ್ರೀಡಾಂಗಣವನ್ನು ಗುಣಮಟ್ಟದಿಂದ ನಿರ್ಮಿಸುವ ಮೂಲಕ ಶೀಘ್ರವಾಗಿ ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಗುತ್ತಿಗೆದಾರರಿಗೆ ಶಾಸಕರು ಸೂಚನೆ ನೀಡಿದರು.

ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಗ್ಯಾರಂಟಿ ಯೋಜನೆಗಳ ಅನು ಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ರಾಜೇಂದ್ರ, ಜಿಲ್ಲಾ ಉಪಾಧ್ಯಕ್ಷ ಬಸ್ತೀಪುರ ರವಿ, ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೋ.ಜಯಲಕ್ಷ್ಮೀ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್, ಮಂಜು, ದೊರೆಸ್ವಾಮಿ, ಸರ್ವೇಯರ್ ಪುಟ್ಟರಾಜು, ಗುತ್ತಿಗೆದಾರ ಗೋಪಾಲ್ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net