

ಚಿಕ್ಕಮಗಳೂರು: ಶೀಘ್ರವೇ ಚಿಕ್ಕಮಗಳೂರಿನಲ್ಲಿ ಸುಸಜ್ಜಿತವಾದ ಕಾಂಗ್ರೆಸ್ ಭವನ ನಿರ್ಮಾಣ ಮಾಡಲಾಗುವುದು. ಆಧುನಿಕ ವ್ಯವಸ್ಥೆಗಳನ್ನೊಳಗೊಂಡ ಭವನ ಇದಾಗಿರಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ನಗರದ ಕುವೆಂಪು ಕಲಾಮಂದಿರ ಸಮೀಪ ಕಾಂಗ್ರೆಸ್ ಭವನ ನಿರ್ಮಾಣ ಕಾಮಗಾರಿಗೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಕಾಂಗ್ರೆಸ್ ಭವನದ ಬಗ್ಗೆ ಮಾಹಿತಿ ನೀಡಿದ ಕಟ್ಟಡ ಸಮಿತಿ ಅಧ್ಯಕ್ಷ ಡಾ. ಡಿ.ಎಲ್.ವಿಜಯ್‌ಕುಮಾರ್, ನೂತನ ಭವನವು ಅಂದಾಜು ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ತ್ವರಿತವಾಗಿ ಕಟ್ಟಡ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಪಕ್ಷದ ನೂತನ ಭವನಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದು, ಇದೀಗ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಪಕ್ಷದ ಹಲವು ಮುಖಂಡರ ನೇತೃತ್ವದಲ್ಲಿ ಕಟ್ಟಡ ಸಮಿತಿ ರಚಿಸಿ ಭವನ ನಿರ್ಮಾಣದಲ್ಲಿ ಕೊರತೆಯಾಗದಂತೆ ಕ್ರಮ ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಕಾಂಗ್ರೆಸ್‌ಜಿಲ್ಲಾಧ್ಯಕ್ಷ ಡಾ.ಅಂಶುಮತ್, ಕಟ್ಟಡ ಸಮಿತಿಯ ಖಜಾಂಚಿ ಕೆ.ಎಸ್.ಶಾಂತೇಗೌಡ, ಸಂಚಾಲಕ ಎಂ.ಸಿ.ಶಿವಾನAದಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಪಕ್ಷದ ಮುಖಂಡರಾದ ಗಾಯತ್ರಿ ಶಾಂತೇಗೌಡ, ಕೆ.ಮಹಮ್ಮದ್, ನಯಾಜ್, ಕೆ.ವಿ.ಮಂಜುನಾಥ್, ಅನ್ಸರ್ ಆಲಿ ಮತ್ತಿತರರಿದ್ದರು.