ಜಯದೇವ ಆಸ್ಪತ್ರೆಯಲ್ಲಿ ಡಾರ್ಮೆಂಟರಿ ನಿರ್ಮಾಣಕ್ಕೆ ಚಾಲನೆ

31
Published on

ಮೈಸೂರು:ನಗರದ ಜಯದೇವ ಆಸ್ಪತ್ರೆ ಆವರಣದಲ್ಲಿ ಅಂದಾಜು 4.5 ಕೋಟಿ ರೂ. ವೆಚ್ಚದಲ್ಲಿ ಡಾರ್ಮೆಂಟರಿ ನಿರ್ಮಾಣಕ್ಕೆ ಜಯದೇವ ಹೃದ್ರೋಗ ಮತ್ತು ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.

ಕೆ.ಆರ್.ಎಸ್. ರಸ್ತೆಯಲ್ಲಿರುವ ಜಯದೇವ ಆಸ್ಪತ್ರೆಗೆ ಭೇಟಿ ನೀಡಿ ಪೂಜೆ ಬಳಿಕ ಮಾತನಾಡಿದ ಅವರು, ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಪ್ರತಿದಿನವೂ ಹೆಚ್ಚಾಗುತ್ತಿದೆ. ಆದ್ದರಿಂದ ರೋಗಿಗಳನ್ನು ನೋಡಿಕೊಳ್ಳುವವರು ಹೆಚ್ಚಾಗುತ್ತಿರುವುದರಿಂದ ರಾತ್ರಿ ವೇಳೆ ಉಳಿದುಕೊಳ್ಳಲು ಡಾರ್ಮೆಂಟರಿ ನಿರ್ಮಾಣ ಮಾಡುತ್ತಿದ್ದೇವೆ ಎಂದರು.

ವರ್ಷದೊಳಗೆ ಕಾಮಗಾರಿ ಪೂರ್ಣ: ಸಮಾಜ ಕಲ್ಯಾಣ ಇಲಾಖೆಯಿಂದ 2 ಕೋಟಿ ರೂ. ಹಾಗೂ ಜಯದೇವ ಆಸ್ಪತ್ರೆಯ ಆಂತರಿಕ ಸಂಪನ್ಮೂಲದಿಂದ 2.5 ಕೋಟಿ ವೆಚ್ಚಮಾಡಿ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಕಾಮಗಾರಿಯನ್ನು ಒಂದು ವರ್ಷದ ಒಳಗೆ ಮುಗಿಸಲು ಗುತ್ತಿಗೆದಾರರಿಗೆ ತಿಳಿಸಲಾಗಿದೆ ಎಂದರು.

ಒಟ್ಟು 4 ಅಂತಸ್ತಿನ 80 ಬೆಡ್‌ನ ಕಟ್ಟಡದ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಜಯದೇವ ಆಸ್ಪತ್ರೆಯ ಇಂಜಿನಿಯರ್‌ಗಳು ಕಾಮಗಾರಿಯ ಉಸ್ತುವಾರಿ ನೋಡಿಕೊಳ್ಳಬೇಕು. ತುರ್ತುಚಿಕಿತ್ಸಾ ಘಟಕಕ್ಕೆ ಬರುವ ರೋಗಿಗಳಿಗೆ ಮೊದಲು ಚಿಕಿತ್ಸೆ ನೀಡಿ ನಂತರ ಫೈಲ್ ಮಾಡಬೇಕು. ಮೈಸೂರು ಜಯದೇವ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಡಾ. ಸದಾನಂದ ನೇತೃತ್ವದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದಾರೆ. ಈ ತಿಂಗಳ ಕೊನೆಯ ವಾರದಲ್ಲಿ ಕಲಬುರಗಿ ಜಯದೇವ ಆಸ್ಪತ್ರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದರು.

ಆಸ್ಪತ್ರೆಯ ಅಧೀಕ್ಷಕ ಡಾ.ಕೆ.ಎಸ್. ಸದಾನಂದ್, ವೈದ್ಯರಾದ ಡಾ. ಹರ್ಷಬಸಪ್ಪ, ಡಾ.ದಿನೇಶ್, ಡಾ. ಶ್ರೀಮಂತ್, ಡಾ. ಶಿವಸ್ವಾಮಿ ಸೋಸಲೆ, ಡಾ.ದೇವರಾಜ್, ಡಾ. ಶ್ರೀನಿಧಿ ಹೆಗ್ಗಡೆ, ಡಾ. ಎಂ.ಎಂ. ಹರ್ಷ, ಡಾ. ಭಾರತಿ, ಡಾ. ರಜಿತ್, ಡಾ. ರಶ್ಮಿ, ನರ್ಸಿಂಗ್ ಅಧೀಕ್ಷಕರಾದ ಯೋಗಲಕ್ಷ್ಮ್ಮೀ, ಹರೀಶ್‌ಕುಮಾರ್, ವಾಣಿಮೋಹನ್, ಲೋಬೋ, ಸಾಧಿಕ್, ಚಂಪಕ, ಇಂಜಿನಿಯರ್‌ಗಳಾದ ಪ್ರಸಾದ್, ಸ್ವರೂಪ್, ವಿಜಯ್, ಗುರುಮೂರ್ತಿ, ನಾಗರಾಜು, ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net