

ಕುಂದಾಪುರ: ಕುಂದಾಪುರ ತಾಲೂಕಿನ ಹೊಸಂಗಡಿ ಹಾಗೂ ಬೈಂದೂರು ತಾಲೂಕಿನ ನಾಡ ಮತ್ತು ಹೇರೂರು ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡಕ್ಕೆ ಜಾಗ ಮಂಜೂರಾಗಿದ್ದು, ಶ್ರೀದಲ್ಲೇ ಆರೋಗ್ಯ ಕೇಂದ್ರ ಕಟ್ಟಡ ನಿರ್ವಾಣಕ್ಕೆ ಚಾಲನೆ ನೀಡಲಾಗುವುದು ಎಂದು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ತಿಳಿಸಿದ್ದಾರೆ.
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಆರೋಗ್ಯ ಕ್ಷೇತ್ರ ಬಲವರ್ಧನೆ ವಾಡುವ ನಿಟ್ಟಿನಲ್ಲಿ 2023-24 ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಡಿ ರಾಜ್ಯದ ಆರೋಗ್ಯ ವಲಯದ ಕಾರ್ಯಕ್ರಮಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಕಾರ್ಯಕ್ರಮ ಇದಾಗಿದೆ. ಕುಂದಾಪುರ ತಾಲೂಕಿನ ಹೊಸಂಗಡಿ, ಬೈಂದೂರು ತಾಲೂಕಿನ ನಾಡ ಹಾಗೂ ಹೇರೂರು ಗ್ರಾಮದ ಮೂರು ಕಡೆಗಳಲ್ಲಿ ಶ್ರೀದಲ್ಲೇ ಹೊಸದಾಗಿ 1.95 ಕೋಟಿ ರೂ. ವೆಚ್ಚದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಟ್ಟಡ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.