ಬಾಲಕರ ಹೈಟೆಕ್ ವಿದ್ಯಾರ್ಥಿನಿಲಯ ನಿರ್ಮಾಣ

IMG_20240307_181720
Published on

ಬಾಗೂರು: ಹೋಬಳಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಮಾಜ ಕಲ್ಯಾಣ ಇಲಾಖೆಯಿಂದ 3.25 ಕೋಟಿ ರೂ.ವೆಚ್ಚದಲ್ಲಿ ಮೆಟ್ರಿಕ್ ಪೂರ್ವ ಬಾಲಕರ ಹೈಟೆಕ್ ವಿದ್ಯಾರ್ಥಿ ನಿಲಯ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.


ಹೋಬಳಿ ಕೇಂದ್ರದ ಮೂಡನಹಳ್ಳಿ ರಸ್ತೆಯಲ್ಲಿನ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯವನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು. ಹೋಬಳಿ ಕೇಂದ್ರದಲ್ಲಿ 2 ಕೋಟಿ ರೂ.ವೆಚ್ಚದಲ್ಲಿ ನೂತನ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜತೆಗೆ 2 ಕೋಟಿ ರೂ.ವೆಚ್ಚದ ಪ್ರವಾಸಿ ಮಂದಿರ ನಿರ್ಮಾಣಕ್ಕೆ ಹಣ ಮಂಜೂರಾಗಿದೆ. ಗ್ರಾಮದೇವತೆ ಸಂತೆಕಾಳೇಶ್ವರಿ ದೇವಾಲಯ ಜೀರ್ಣೋದ್ಧಾರಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ ಎಂದರು.


ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಎಚ್.ಶಿವಣ್ಣ, ಗ್ರಾಮ ಪಂಚಾಯಿತಿ ಅಧ್ಯಕ್ಷ ಲಕ್ಷ್ಮಣ್, ಉಪಾಧ್ಯಕ್ಷೆ ವರಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಮುಖ್ಯ ಇಂಜಿನಿಯರ್ ನಾಗರಾಜ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶಂಕರಮೂರ್ತಿ, ಗುತ್ತಿಗೆದಾರ ಅಗ್ರಹಾರ ಶಂಕರ್, ಗ್ರಾಮ ಪಂಚಾಯಿತಿ ಸದಸ್ಯೆ ರೂಪಾ ರಘು, ಮುಖಂಡರಾದ ಮರಿದೇವೇಗೌಡ, ಎನ್.ಬಸವರಾಜು, ಮಲ್ಲೇಶ, ರಾಮಚಂದ್ರ, ಕಾಂತರಾಜು, ವಾರ್ಡನ್ ಕುಮಾರೇಗೌಡ, ಪಿಡಿಒ ರಘು ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net