ನಗರದಲ್ಲೇ ಡಿಸಿ ನೂತನ ಕಚೇರಿ ನಿರ್ಮಾಣ

CTD NEWS MLA-CM-----
Published on

ಚಿತ್ರದುರ್ಗ: ನಗರದಲ್ಲಿರುವ ಡಿಸಿ ವಸತಿಗೃಹದ ಬಳಿ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ದೇಶಿಸಿದ್ದಾರೆ.

ಬೆಂಗಳೂರಲ್ಲಿ ಗುರುವಾರ ಚಿತ್ರದುರ್ಗ ನಗರದ ಅಭಿವೃದ್ಧಿ ವಿಚಾರ ಕುರಿತಂತೆ ಜಿಲ್ಲೆಯ ಶಾಸಕರೊಂದಿಗೆ ನಡೆದ ಸಭೆಯಲ್ಲಿ, ಕುಂಚಿಗನಾಳ್ ಬಳಿ ನಿರ್ಮಿಸುತ್ತಿರುವ ಜಿಲ್ಲಾಧಿಕಾರಿ ಕಚೇರಿ ನೂತನ ಕಟ್ಟಡವನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವಂತೆ ಸೂಚಿಸಿದ್ದಾರೆ.

ನಗರದ ಮುಖ್ಯರಸ್ತೆ ವಿಸ್ತರಣೆಗೂ ನಿರ್ದೇಶನ ನೀಡಿದ್ದಾರೆ.

ಸ್ಥಳೀಯ ಶಾಸಕ ಕೆ.ಸಿ. ವೀರೇಂದ್ರಪಪ್ಪಿ ಕ್ಷೇತ್ರದಲ್ಲಿ ಆಗಬೇಕಿರುವ ಕೆಲಸಗಳ ಬಗ್ಗೆ ಸಿಎಂ ಬಳಿ ವಿಷಯ ಪ್ರಸ್ತಾಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಚಳ್ಳಕೆರೆ ಶಾಸಕ ಟಿ.ರಘು ಮೂರ್ತಿ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net