

ಗುಳೇದಗುಡ್ಡ: ಈ ಹಿಂದೆ ಸಿದ್ದರಾಮಯ್ಯ ಅವರು ಬಾದಾಮಿ ಶಾಸಕರಾಗಿದ್ದ ವೇಳೆ ಗುಳೇದಗುಡ್ಡ ತಾಲೂಕು ಕೇಂದ್ರದಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ, ಆಗ ಅನುದಾನ ಮಂಜೂರಾಗಿರಲಿಲ್ಲ. ಆದರೆ, ಬಿಜೆಪಿ ಸರ್ಕಾರ ಬದಲಾದ ಬಳಿಕ ಈಗ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳಾಗಿದ್ದು ಗುಳೇದಗುಡ್ಡ ಪ್ರಜಾಸೌಧ ನಿರ್ಮಾಣಕ್ಕೆ 8.60 ಕೋಟಿ ರೂ. ಸೇರಿ ರಾಜ್ಯದ ಎಲ್ಲ ನೂತನ ತಾಲೂಕು ಕೇಂದ್ರಗಳಲ್ಲಿ ಪ್ರಜಾಸೌಧ ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬಾದಾಮಿ ಹಾಗೂ ಗುಳೇದಗುಡ್ಡದ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡ ಹೊಳಬಸು ಶೆಟ್ಟರ ತಿಳಿಸಿದ್ದಾರೆ.