ರೈಲು ನಿಲುಗಡೆ, ಮೇಲ್ಸೇತುವೆ ನಿರ್ಮಾಣ: ಸಂಸದ ಕ್ಯಾ.ಬ್ರಿಜೇಶ್ ಚೌಟಗೆ ಮನವಿ

manavi
ಸಂಸದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಸಲಾಯಿತು. ಗ್ರಾ.ಪಂ ಅಧ್ಯಕ್ಷ ರಾಮಣ್ಣ ಜಾಲ್ತಾರು, ನಿಕಟಪೂರ್ವ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ ವಿ ತೀರ್ಥರಾಮ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Published on

ಕಡಬ: ಮಂಗಳೂರು-ಸುಬ್ರಹ್ಮಣ್ಯ ಮಧ್ಯೆ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಂಜೆ ಮತ್ತು ಬೆಳಗ್ಗೆ ಪ್ಯಾಸೆಂಜರ್ ರೈಲು ಸಂಚರಿಸಲು ಕ್ರಮ ಕೈಗೊಳ್ಳುವ ಬಗ್ಗೆ ಹಾಗೂ ಎಡಮಂಗಲದಲ್ಲಿ ಎಲ್ಸಿನಂ 70 ದೇವಸ್ಥಾನದ ಹತ್ತಿರ ರೈಲ್ವೆ ಮೇಲ್ಸೇತುವೆ ನಿರ್ಮಾಣ ಮಾಡಬೇಕು ಮತ್ತು ಎಲ್ಲ ಎಕ್ಸ್‌ಪ್ರೆಸ್ ರೈಲುಗಳು ಎಡಮಂಗಲದಲ್ಲಿ ನಿಲುಗಡೆ ಆಗಬೇಕು ಎಂದು ಗ್ರಾಮ ಪಂಚಾಯತಿ ಅಧಿಕಾರಿಗಳು ಸಂಸದ ಬ್ರಿಜೇಶ್ ಚೌಟಗೆ ಮನವಿ ಮಾಡಿದ್ದಾರೆ.

ಗ್ರಾ.ಪಂ ಅಧ್ಯಕ್ಷ ರಾಮಣ್ಣ ಜಾಲ್ತಾರು, ನಿಕಟಪೂರ್ವ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ಎ.ವಿ ತೀರ್ಥರಾಮ, ಸುಳ್ಯ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಮಂಡಲ ಪ್ರಧಾನ ಕಾರ್ಯದರ್ಶಿ ವಿನಯ್ ಕಂದಡ್ಕ ಸೇರಿದಂತೆ ಹಲವರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟಗೆ ಮನವಿ ಸಲ್ಲಿಸಿದರು. ಸಂಸದರಿಂದ ಸಕಾರಾತ್ಮಕ ಸ್ಪಂದನೆ ದೊರೆತಿದ್ದು ಮುಂದಿನ ದಿನಗಳಲ್ಲಿ ರೈಲ್ವೆ ಸಚಿವರ ಜತೆ ಚರ್ಚಿಸಿ ಬೇಡಿಕೆಯನ್ನು ಶೀಘ್ರದಲ್ಲಿ ನೆರವೇರಿಸುವ ಭರವಸೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net