ಯಲ್ಲಾಪುರದಲ್ಲಿ ಸಂವಿಧಾನ ಜಾಗೃತಿ ಜಾಥಾ

Samvidhana jatha
Published on

ಯಲ್ಲಾಪುರ : ಸಂವಿಧಾನ ಕುರಿತು ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಸಂಚರಿಸುತ್ತಿರುವ ಸಂವಿಧಾನ ಜಾಗೃತಿ ಜಾಥಾವು ಇಂದು ಯಲ್ಲಾಪುರ ತಾಲೂಕಿನ ಕಂಪ್ಲಿ, ಹಾಸಣಗಿ, ಉಮ್ಮಚಗಿ, ಹಿತ್ಲಳ್ಳಿ, ಕುಂದರಗಿ, ಹುಣಶೆಟ್ಠಿಕೊಪ್ಪ ಗ್ರಾಮ ಪಂಚಾಯತ್‌ಗಳಲ್ಲಿ ಸಂಚರಿಸಿ ಸಂವಿಧಾನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಕಾರ್ಯಕ್ರಮದಲ್ಲಿ ಜಾಥಾದಲ್ಲಿನ ಅಂಬೇಡ್ಕರ್ ಪ್ರತಿಮಗೆ ಮಾಲಾರ್ಪಣೆ ಮಾಡಿ ಜಾಥಾವನ್ನು ಸ್ವಾಗತಿಸಲಾಯಿತು. ಗ್ರಾಮ ಪಂಚಾಯತ್‌ನ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net