ಇಂದು ಸಮಾಲೋಚನಾ ಸಭೆ

YESUMITRA
YESUMITRA
Published on

 ರಾಯಚೂರು ಬೀದಿ ವ್ಯಾಪಾರಿಗಳ ಒಕ್ಕೂಟದಿಂದ ಸಮಾಲೋಚನಾ ಸಭೆಯನ್ನು ನಗರದ ಪಂ. ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಏ೨೬ ರಂದು ಬೆಳಿಗ್ಗೆ ೧೧ ಗಂಟೆಗೆ ಆಯೋಜಿಸಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಯೇಸುಮಿತ್ರ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ ,ಬೀದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಸಿ.ಈ,ರಂಗಸ್ವಾಮಿ,

ನಗರ ಶಾಸಕ ಡಾ.ಶಿವರಾಜ ಪಾಟೀಲ್, ದದ್ದಲ್ ಬಸನಗೌಡ ಪಾಲಿಕೆ ಅಧ್ಯಕ್ಷ ನರಸಮ್ಮ ನರಸಿಂಹಲು ಮಾಡಗಿರಿ, ಉಪಾಧ್ಯಕ್ಷ ಸಾಜೀದ ಸಮೀರ್, ಪಾಲಿಕೆ ಅಯುಕ್ತ ಜುಬಿನ ಮೊಹಾಪಾತ್ರ, ಎಸ್ಪಿ ಪುಟ್ಟಮಾದಯ್ಯ ಸೇರಿದಂತೆ ಅನೇಕರು ಆಗಮಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶ್ರೀನಿವಾಸ ಕಲವಲದೊಡ್ಡಿ, ಸೈಯದ್ ಮಾನು, ಗೋಪಿನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net