ಬೀದಿ ಬದಿ ವ್ಯಾಪಾರಿಗಳಿಂದ ಸಮಾಲೋಚನಾ ಸಭೆ

raichur
raichur
Published on

 ರಾಯಚೂರು ಬೀದಿ ಬದಿ ವ್ಯಾಪಾರಿಗಳಿಗೆ ಕಾನೂನಿನ ಬಗ್ಗೆ ಇರುವ ಮಾಹಿತಿ ಕೊರತೆಯಿಂದಲೇ ಅಽಕಾರಿಗಳು ರಾಜಕೀಯ ವ್ಯಕ್ತಿಗಳು ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ಸಿ.ಇ.ರಂಗಸ್ವಾಮಿ ಹೇಳಿದರು.

ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗಮAದಿರದಲ್ಲಿ ಶನಿವಾರ ಬೀದಿ ಬದಿ ವ್ಯಾಪಾರಿಗಳ ಸಮಾಲೋಚನಾ ಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಬೀದಿ ಬದಿ ವ್ಯಾಪಾರಿಗಳು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ತಮ್ಮ ವ್ಯಾಪಾರ ಮಾತ್ರ ಗೊತ್ತು. ಪ್ರತಿಯೊಬ್ಬರಿಗೂ ಎಲ್ಲಾ ರೀತಿಯ ವಸ್ತುಗಳನ್ನು ಮಾರಾಟ ಮಾಡುತ್ತಾ ಸೇವೆ ನೀಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ಸಮಸ್ಯೆಗಳ ಸಾಕಷ್ಟಿವೆ ಅವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಹೇಳಿದರು.

ಇಂದಿನ ಸಮಾಲೋಚನಾ ಸಭೆಯಲ್ಲಿ ಆ ಕಾನೂನಿನ ಬಗ್ಗೆ ತಿಳಿದುಕೊಂಡು ಇತರರಿಗೂ ತಿಳಿಸುವಂತಾಗಬೇಕಿದೆ. ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸುವ ಕೆಲಸ ಆಗಬೇಕೆಂAದು ೨೦೧೩ರಲ್ಲಿ ಸುಪ್ರಿಂ ಕೋರ್ಟ್ ಸ್ಪಷ್ಟವಾದ ಆದೇಶ ಹೊರಡಿಸಿದೆ. ಬೀದಿ ಬದಿ ವ್ಯಾಪಾರಿಗಳ ಸಬಲೀಕರಣಕ್ಕಾಗಿ ಇರುವ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಮುಂದಿನ ದಿನಗಳಲ್ಲಿ ಮಹಾನಗರ ಪಾಲಿಕೆಯಿಂದ ಪ್ರತಿಯೊಬ್ಬ ಬೀದಿಬದಿ ವ್ಯಾಪಾರಿಗೂ ತಳ್ಳುಗಾಡಿ ಕೊಡಿಸುವ ಕೆಲಸವನ್ನು ಒಕ್ಕೂಟದಿಂದ ಮಾಡಲಾಗುತ್ತದೆ.

ಮುಂದಿನ ದಿನಗಳಲ್ಲಿ ಪಟ್ಟಣ ಬೀದಿ ಬದಿ ವ್ಯಾಪಾರಿಗಳ ಸಮಿತಿ, ಕೊಂದು ಕೊರತೆ ಸಮಿತಿ ಸೇರಿದಂತೆ ಅನೇಕ ಸಮಿತಿಗಳು ರಚನೆಯಾಗಲಿವೆ. ಬೀದಿ ಬದಿ ವ್ಯಾಪಾರಿಗಳಿಗೆ ಬೇಕಾದ ಸವಲತ್ತುಗಳನ್ನು ನೀಡಲಾಗುತ್ತದೆ. ಅದನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು. ಅಽಕಾರಿಗಳು ಬೀದಿ ಬದಿ ವ್ಯಾಪಾರಿಗಳಿಗೆ ಅನವಶ್ಯಕವಾಗಿ ತೊಂದರೆ ಮಾಡಿದ್ದಲ್ಲಿ ಒಕ್ಕೂಟದಿಂದ ಕಲಬುರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗುತ್ತದೆ ಎಂದರು.

ಕೌಶಲ್ಯಾಭಿವೃದ್ಧಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಜಿ.ಯು.ಹುಡೇದ್ ಮಾತನಾಡಿ, ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಬಹಳ ಮುಖ್ಯವಾಗಿರುತ್ತದೆ. ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ಹಕ್ಕುಗಳ ಕುರಿತು ಅರಿವು ಮೂಡಿಸಲು ಸಮಾಲೋಚನಾ ಸಭೆ ಹಮ್ಮಿಕೊಂಡಿರುವುದು ಅತ್ಯಂತ ಪ್ರಶಂಸನೀಯ ಸಂಗತಿಯಾಗಿದ್ದು, ಬೀದಿ ಬದಿ ವ್ಯಾಪಾರಿಗಳು ಪಿಎಂ.ಸ್ವಾನಿಽ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಪವಾಡೆವು ಬಸ್ಸಪ್ಪ ಚಲುವಾದಿ, ಜಿಲ್ಲಾಧ್ಯಕ್ಷ ಯೇಸುಮಿತ್ರ, ಮಹಾನಗರ ಪಾಲಿಕೆಯ ಸಮುದಾಯ ಸಂಘಟಕ ಕೃಷ್ಣ ಕಟ್ಟಿಮನಿ, ಪಾಲಿಕೆಯ ವ್ಯವಸ್ಥಾಪಕ ರಾಜು, ಕೆಪಿಸಿಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತೀಕ್ ಪಾಟೀಲ್,ಪ್ರಮುಖರಾದ ಆಂಜನೇಯ್ಯ ಕಾಗೆ, ಸಂಗಪ್ಪ, ಶ್ರೀನಿವಾಸ ಕಲವಲದೊಡ್ಡಿ, ಗೀತಾ ಸಿಂಗ್, ನಬೀಸಾಬ್, ಸೈಯದ್ ಮೋನು ಸೇರಿ ಅನೇಕರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net