ವಸತಿ ಯೋಜನೆ ಕುರಿತು ಸಮಾಲೋಚನೆ

byr
ಶಿವಮೊಗ್ಗಕ್ಕೆ ಆಗಮಿಸಿದ್ದ ಜಮೀರ್ ಅಹ್ಮದ್ ಅವರನ್ನು ಬಿ.ವೈ.ರಾಘವೇಂದ್ರ ಭೇಟಿಯಾಗಿ ಚರ್ಚಿಸಿದರು.
Published on

ಶಿವಮೊಗ್ಗ: ಆಶ್ರಯ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳವಾರ ನಗರಕ್ಕೆ ಆಗಮಿಸಿದ್ದ ವಸತಿ ಸಚಿವ ಜಮೀರ್ ಅಹ್ಮದ್ ಅವರನ್ನು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಭೇಟಿಯಾಗಿ ವಸತಿ ಯೋಜನೆಗಳ ಕುರಿತು ಕೆಲ ಸಮಯ ಸಮಾಲೋಚನೆ ನಡೆಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ (ಗ್ರಾಮೀಣ) ಯನ್ನು 2024-25 ರಿಂದ 2028-29ರ ಅವಧಿಗೆ ಅಂದರೆ ಮುಂದಿನ 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು ಇದರಲ್ಲಿ ಎರಡು ಕೋಟಿ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಯೋಜನೆಯ ಮುಂದುವರಿದ ಭಾಗವಾಗಿ ಅರ್ಹ ವಸತಿರಹಿತ ಹಾಗೂ ನಿವೇಶನ ರಹಿತರ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವು ನಿರ್ಧರಿಸಿದೆ. ಜಿಲ್ಲೆಯಲ್ಲಿ ಇದು ಯಶಸ್ವಿಗೊಳ್ಳಲು ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಬೇಕೆಂದು ವಸತಿ ಸಚಿವರ ಗಮನಸೆಳೆದರು.

ರಾಜ್ಯದಲ್ಲಿ ಈ ಸಾಲಿನಲ್ಲಿ 7,20,731 ಮನೆಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 1,11,143 ಮನೆಗಳನ್ನು ನಿರ್ಮಿಸುವ ಗುರಿಯಿದೆ. ಇದಕ್ಕೆ ಸೂಕ್ತ ಸ್ಪಂದನೆ ನೀಡಬೇಕೆಂದು ಕೋರಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net