ಜಲಸಂಪನ್ಮೂಲ ಸಚಿವರೊಂದಿಗೆ ಸಮಾಲೋಚನೆ

Sharanprakash Patil
Published on

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಕೊನೆಭಾಗಕ್ಕೆ ನೀರು ಒದಗಿಸಲು ಉಂಟಾಗಿರುವ ಸಮಸ್ಯೆಯಗಳನ್ನು ನಿವಾರಿಸಿ ಕೊನೆಭಾಗದ ರೈತರಿಗೆ ನೀರು ಹರಿಸಲು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಜತೆಗೆ ಸಮಾಲೋಚನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದರು.
ನಗರದ ಜಿ.ಪಂ. ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿ, ಮೇಲ್ಭಾಗದಲ್ಲಿ ಸಮರ್ಪಕ ಗೇಜ್ ನಿರ್ವಹಣೆ ಮಾಡದ ಕಾರಣ ಕೊನೆಭಾಗಕ್ಕೆ ನೀರು ತಲುಪುತ್ತಿಲ್ಲ. ಈಗಾಗಲೇ ಜಿಲ್ಲಾಕಾರಿ, ಎಸ್ಪಿ ಕಾಲುವೆ ಮೇಲೆ ಸಂಚರಿಸಿ ಸಮಸ್ಯೆ ನಿವಾರಣೆಗೆ ಪ್ರಯತ್ನಿಸಿದ್ದಾರೆ ಎಂದರು.
ಕಾಲುವೆ ಮೇಲ್ಭಾಗದಿಂದ ಕೆಳಭಾಗಕ್ಕೆ ನೀರು ಸರಿಯಾಗಿ ಹರಿದು ಬಾರದೇ ಇರುವುದು ಹಾಗೂ ಸೋರಿಕೆ ಕುರಿತು ಪ್ರಾದೇಶಿಕ ಆಯುಕ್ತರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲಾಕಾರಿಗಳ ಜತೆಗೆ ಚರ್ಚಿಸುವಂತೆ ಸೂಚನೆ ನೀಡಿ ನೀರಾವರಿ ಸಲಹಾ ಸಮಿತಿ ತೀರ್ಮಾನದಂತೆ ನೀರು ಹರಿಸಲು ತಿಳಿಸಲಾಗಿದೆ.
ಆಡಳಿತಾತ್ಮಕ ಎಲ್ಲ ನಿರ್ದೇಶನಗಳನ್ನು ನೀಡಲಾಗಿದೆ. ಮೇಲ್ಭಾಗದಲ್ಲಿ ನೀರು ದುರ್ಬಳಕೆಯಾಗುತ್ತಿರುವುದನ್ನು ತಡೆಯಲು ಕ್ರಮ ವಹಿಸಲಾಗಿದ್ದು, ಕೆಳಭಾಗಕ್ಕೆ ನೀರು ಬಾರದಿದ್ದರೆ ನೀರಾವರಿ ನಿಗಮದ ಅಕಾರಳೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಡಾ.ಶರಣಪ್ರಕಾಶ ಪಾಟೀಲ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net