ಟೆಕ್​ ಸಂಸ್ಥೆಗಳ ಸಮಸ್ಯೆ ಪರಿಹಾರಕ್ಕೆ ಸಮಾಲೋಚನಾ ಸಮಿತಿ

dkshivakumar
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಟೆಕ್​ ಪಾರ್ಕ್​ಗಳಲ್ಲಿರುವ ಸಂಸ್ಥೆಗಳು ಎದುರಿಸುತ್ತಿರುವ ಸವಾಲು ಮತ್ತು ಸಮಸ್ಯೆಯನ್ನು ಪ್ರಾಮುಖ್ಯತೆ ಮೇರೆಗೆ ಬಗೆಹರಿಸಲು ರಾಜ್ಯ ಸರ್ಕಾರ, ಸಮಾಲೋಚನಾ ಸಮಿತಿ ರಚಿಸಿದೆ.

ಡಿಸಿಎಂ ಡಿ.ಕೆ.ಶಿವಕುಮಾರ್​ ಸಮಿತಿ ಅಧ್ಯಕ್ಷರಾದರೆ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರು ಉಪಾಧ್ಯಕ್ಷರಾಗಿದ್ದಾರೆ. ಕಿಯೋನಿಕ್ಸ್​ ಸಂಸ್ಥೆಯ ಅಧ್ಯಕ್ಷರು, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಬೆಂಗಳೂರು ನಗರ ಪೊಲೀಸ್​ ಆಯುಕ್ತ ಮತ್ತು ಡಿಸಿಎಂ ಕಾರ್ಯದರ್ಶಿಯವರು ಸಮಿತಿ ಸದಸ್ಯರಾಗಿದ್ದಾರೆ. ಬಿಬಿಎಂಪಿ ಪ್ರಧಾನ ಅಭಿಯಂತರ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ನಗರದಲ್ಲಿ ಇನ್ಪೋಸಿಸ್​, ವಿಪ್ರೋ, ಗೂಗಲ್​, ಮೈಕ್ರೋಸ್ಟ್​ಾ, ಐಬಿಎಂ ಸೇರಿ ವಿಶ್ವದ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಕಂಪನಿಗಳಲ್ಲಿ ಲಾಂತರ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್​ ಸಿಟಿ, ವೈಟ್​ಫೀಲ್ಡ್​, ಮಾನ್ಯತಾ ಟೆಕ್​ ಪಾರ್ಕ್​ ಸೇರಿ ನಗರದ ವಿವಿಧ ಕಡೆಗಳಲ್ಲಿರುವ ಟೆಕ್​ ಪಾರ್ಕ್​ಗಳು ಎದುರಿಸುತ್ತಿರುವ ಸಮಸ್ಯೆ ಬಗೆಹರಿಸಲು ಸಮಿತಿ ರಚಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net