ಬ್ರಹ್ಮಕಲಶೋತ್ಸವ ಯಶಸ್ವಿಗೊಳಿಸುವುದು ಭಕ್ತರ ಕರ್ತವ್ಯ: ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿಕೆ

manila
ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ನವೀಕರಣ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ನಡೆದ ಸಮಾಲೋಚನಾ ಸಭೆ ಮಾಣಿಲ ಶ್ರೀಮೋಹನದಾಸ ಸ್ವಾಮೀಜಿ ಉದ್ಘಾಟಿಸಿದರು.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನ ನವೀಕರಣ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಸಮಾಲೋಚನಾ ಸಭೆ ಶನಿವಾರ ದೇವಾಲಯ ಸಭಾಂಗಣದಲ್ಲಿ ಜರುಗಿತು. ದೇವಸ್ಥಾನದ ನವೀಕರಣ ಬ್ರಹ್ಮಕಲಶೋತ್ಸವ 2025 ಮಾ.27ರಿಂದ ಏ.7ರ ವರೆಗೆ ಜರುಗಲಿದ್ದು, ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಸಭೆ ಆಯೋಜಿಸಲಾಗಿತ್ತು.

ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಸಮಾರಂಭ ಉದ್ಘಾಟಿಸಿ ಆಶೀರ್ವಚನ ನೀಡಿ, ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾಗಿರುವ ಮಧೂರು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಾರಂಭ ಯಶಸ್ವಿಗೊಳಿಸುವುದು ಪ್ರತಿಯೊಬ್ಬ ಭಕ್ತನ ಕರ್ತವ್ಯವಾಗಬೇಕು. ದೇವಸ್ವಂ ಮಂಡಳಿ, ದಾನಿಗಳು ಹಾಗೂ ಭಕ್ತಾದಿಗಳು ಜತೆಯಾಗಿ ಕೆಲಸ ನಿರ್ವಹಿಸುವ ಮೂಲಕ ಬೃಹತ್ ಕಾರ್ಯಕ್ರಮದ ಯಶಸ್ವಿ ಸಾಧ್ಯ ಎಂದು ತಿಳಿಸಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಡಾ.ಬಿ.ಎಸ್.ರಾವ್ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ, ಉದ್ಯಮಿ ಕುಳೂರು ಕನ್ಯಾನ ಸದಾಶಿವ ಶೆಟ್ಟಿ, ಉಪಾಧ್ಯಕ್ಷ ಕೆ.ಕೆ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿ ಗೌರವ ಉಪಾಧ್ಯಕ್ಷ ಬಿ.ಕೆ ಮಧೂರು, ದೇವಸ್ಥಾನದ ಪವಿತ್ರಪಾಣಿ ರತನ್ ಕುಮಾರ್ ಕಾಮಡ, ದೇವಸ್ಥಾನ ಕಾರ್ಯನಿರ್ವಹಣಾಧಿಕಾರಿ ರಾಜೇಶ್, ಕಾರ್ಯಾಧ್ಯಕ್ಷ ಮಂಜುನಾಥ ಕಾಮತ್, ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಬ್ರೋಶರ್ ಬಿಡುಗಡೆಗೊಳಿಸಲಾಯಿತು.

ದೇವಸ್ಥಾನದ ಮುಖ್ಯಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಪ್ರಾರ್ಥಿಸಿದರು. ಮಂಜುನಾಥ ಕಾಮತ್ ಸ್ವಾಗತಿಸಿ, ಉದಯ ಕೊಲ್ಲಂಬಾರೆ ನಿರೂಪಿಸಿದರು. ಗಿರೀಶ್ ಕೆ.ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net