ವಿಷ ಸೇವಿಸಿ ವೈದ್ಯ ಆತ್ಮಹತ್ಯೆಗೆ ಶರಣು

Doctor Sucide
ರಮೇಶ ಜಾಧವ್
Published on

ಮುದಗಲ್: ಪಟ್ಟಣ ಹೊರವಲಯದ ತಾವರಗೇರಾ ಮುಖ್ಯ ರಸ್ತೆಗೆ ಹೊಂದಿಕೊಂಡ ಗಣಿಗಾರಿಕೆ ಪ್ರದೇಶದಲ್ಲಿ ಶುಕ್ರವಾರ ವೈದ್ಯರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೀದರ್ ಮೂಲದ ಡಾ.ರಮೇಶ ಜಾಧವ್ (32) ಮೃತ. ಇವರು ಯಲಬುರ್ಗಾ ತಾಲೂಕಿನ ಗಾಣಧಾಳ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಕಾರ್ಯನಿರ್ವಹಿಸುತ್ತಿದ್ದರು.

ಎರಡು ವರ್ಷಗಳ ಹಿಂದಷ್ಟೇ ಮದುವೆಯಾಗಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ವಿಷ ಸೇವಿಸಿ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಂದೆ ತುಳಸೀರಾಮ್ ಜಾಧವ್ ನೀಡಿದ ದೂರಿನ ಮೇರೆಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net