

ಉಡುಪಿ: ಬಡವರ್ಗದ ಜನತೆಗೆ ಇಂತಹ ಕಂಟೈನರ್ ಮನೆಗಳು ಅತ್ಯಂತ ಹೆಚ್ಚು ಪ್ರಯೋಜನಕಾರಿಯಾಗಿದ್ದು, ಈ ಮನೆ ನಿರ್ಮಾಣದ ವೆಚ್ಚವೂ ಸಹ ಕಡಿಮೆಯಾಗಲಿದೆ. 6 ಲಕ್ಷ ರೂ. ವೆಚ್ಚದಲ್ಲಿ ಈ ಮನೆ ನಿರ್ಮಾಣಗೊಳ್ಳಲಿದ್ದು, ಅರ್ಹ ಬಡ ಜನತೆಯನ್ನು ಗುರುತಿಸಿ ಇಲಾಖೆ ವತಿಯಿಂದ ಇಂತಹ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ, ಪ.ಜಾತಿ ಮತ್ತು ಪಂಗಡದ ಅಲೆಮಾರಿ ಅಭಿವೃಧ್ದಿ ನಿಗಮ ಹಾಗೂ ಚೇರ್ಕಾಡಿ ಗ್ರಾಮ ಪಂಚಾಯಿತಿ ಸಂಯುಕ್ತ ಆಶ್ರಯದಲ್ಲಿ ಚೇರ್ಕಾಡಿಯ ಮೈತಗುಲಿಯಲ್ಲಿ ನಿರ್ಮಿಸಿದ ಕಂಟೈನರ್ ಮನೆ ಉದ್ಘಾಟಿಸಿ, ಮಾತನಾಡಿದರು.
ಚೇರ್ಕಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೇಖಾ ಭಟ್, ಆರೂರು ಗ್ರಾ.ಪಂ. ಅಧ್ಯಕ್ಷೆ ಮಮತಾ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಬ್ರಹ್ಮಾವರ ತಹಸೀಲ್ದಾರ್ ರಾಜಶೇಖರ ಮೂರ್ತಿ , ಬ್ರಹ್ಮಾವರ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.