

ಹುಬ್ಬಳ್ಳಿ: ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದು ಜೆಡಿಎಸ್ ಹು-ಧಾ ಸೆಂಟ್ರಲ್ ಕ್ಷೇತ್ರದ ಮಾಜಿ ಅಧ್ಯಕ್ಷ ರಾಜು ನಾಯಕವಾಡಿ ತಿಳಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹಳಷ್ಟು ವರ್ಷದಿಂದ ಜೆಡಿಎಸ್ನಲ್ಲಿ ಸೇವೆ ಸಲ್ಲಿಸಿದ್ದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನಗೆ ಬಿ-ಫಾಮ್ರ್ ಕೊಡಲಿಲ್ಲ. ಇದರಿಂದ ನನ್ನ ಬೆಂಬಲಿಗರು, ಎಸ್ಎಸ್ಕೆ ಸಮಾಜದವರು ಬೇಸರಗೊಂಡಿದ್ದಾರೆ. ಹಾಗಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು.
ಪ್ರಮುಖರಾದ ಗುರು ಅಂಗಡಿ, ಪರಶು ಬಾಕಳೆ, ರಾಜೇಂದ್ರ ಮಾಲಗತ್ತಿ ಸುದ್ದಿಗೋಷ್ಠಿಯಲ್ಲಿದ್ದರು.