

ಮೈಸೂರು: ಹುದ್ದೆ ಕಾಯಂ ಮಾಡುವಂತೆ ಒತ್ತಾಯಿಸಿ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಸಂಘದಿಂದ ಆರಂಭಿಸಿರುವ ಪ್ರತಿಭಟನೆ ಬುಧವಾರವೂ ಮುಂದುವರೆಯಿತು.
ನಗರದ ಹುಣಸೂರು ರಸ್ತೆಯಲ್ಲಿರುವ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ಎದುರು ಧರಣಿ ನಡೆಸಿದ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳ ಈಡೇರಿಕೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿದರು.
ಕಾಲೇಜು ಶಿಕ್ಷಣ ಇಲಾಖೆ ವ್ಯಾಪ್ತಿಯ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 12 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವವರಿಗೆ ಇಂದಿಗೂ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ದೂರಿದರು. ಸಂಘದ ಅಧ್ಯಕ್ಷ ಜಿ.ವಿ. ರಮೇಶ್, ಸಂಚಾಲಕ ಡಿ.ನಾಗರಾಜ್, ಪ್ರಮುಖರಾದ ಹನುಮಂತೇಶ್, ಆಶಾಲತಾ ಇತರರು ಇದ್ದರು.