ಚಿರತೆ ಸೆರೆಗೆ ಮುಂದುವರೆದ ಕಾರ್ಯಾಚರಣೆ

29 vikram 9
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕರ್ನಾಟಕ ವಿಶ್ವ ವಿದ್ಯಾಲಯದ ಆವರಣದಲ್ಲಿ ಕಾಣಿಸಿಕೊಂಡಿರುವ ಚಿರತೆ ಸೆರೆಗಾಗಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ ಮುಂದುವರೆದಿದೆ.
ಕವಿವಿ ಆವರಣದಲ್ಲಿ ಕಾಣಿಸಿಕೊಂಡ ಚಿರತೆ ಸೆರೆಗಾಗಿ ಸುಮಾರು ಒಂದು ತಿಂಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಚಿರತೆ ಓಡಾಡಿದ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದಂತೆ ಆವರಣದ 3-4 ಕಡೆಗಳಲ್ಲಿ ಬೋನುಗಳನ್ನು ಅಳವಡಿಸಲಾಗಿದೆ. ಇದಲ್ಲದೆ ಟ್ರ್ಯಾಪಿಂಗ್​ ಕ್ಯಾಮೆರಾ ಸಹ ಅಳವಡಿಸಲಾಗಿದೆ.
ಕವಿವಿ ಆವರಣದಲ್ಲಿ ಜನ ಸಂಚಾರ ಹೆಚ್ಚಿರುವ ಕಾರಣಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಜನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಇಲಾಖೆ ಅಧಿಕಾರಿಗಳು ತಪಾಸಣೆ ಕಾರ್ಯದ ಮೂಲಕ ಜನರು ಓಡಾದಂತೆ ಎಚ್ಚರಿಕೆ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net