ಮೈಸೂರಿನಲ್ಲಿ ಮುಂದುವರೆದ ಮಳೆಯ ಆರ್ಭಟ

Rain in mysore
Published on

ಮೈಸೂರು: ನಗರದಲ್ಲಿ ಪೂರ್ವ ಮುಂಗಾರು ಆರ್ಭಟ ಮುಂದುವರೆದಿದ್ದು, ಬುಧವಾರ ನಗರದಲ್ಲಿ ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲಿನ ವಾತಾವರಣ ಕಾಣಿಸಿಕೊಂಡು ಸಂಜೆ ಧಾರಾಕಾರ ಮಳೆ ಸುರಿಯಿತು.

ಗುಡುಗು, ಸಿಡಿಲು, ಗಾಳಿಯ ಆರ್ಭಟ ಇಲ್ಲದೆ ಮಳೆ ಸುರಿದ ಹಿನ್ನೆಲೆಯಲ್ಲಿ ಮಳೆಯು ಜನ ಜೀವನದ ಮೇಲೆ ದೊಡ್ಡ ಪರಿಣಾಮ ಬೀರಲಿಲ್ಲ. ಸಂಜೆ ಕಾಣಿಸಿಕೊಂಡ ಮಳೆಯಿಂದ ಜನರು ಒಂದೆಡೆಯಿಂದ ಮತ್ತೊಂದೆಡೆ ತೆರಳಲು ಪರದಾಡಿದರು. ವಿಶೇಷವಾಗಿ ದ್ವಿ ಚಕ್ರ ಸವಾರರು ಮಳೆಯಿಂದ ಸಮಸ್ಯೆ ಎದುರಿಸಿದರು. ಹಲವಾರು ಜನರು ಅಂಗಡಿ ಮುಂಗಟ್ಟುಗಳ ಮುಂದೆ ನಿಂತು ಮಳೆ ನಿಂತ ನಂತರ ತೆರಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net