ಕ್ಷೇತ್ರದ ಅಭಿವೃದ್ಧಿಗಾಗಿ ಸತತ ಪ್ರಯತ್ನ

3Npn1
Published on

ನಿಪ್ಪಾಣಿ: ಅಮೃತ-2 ಯೋಜನೆಯಡಿ 32 ಕೋಟಿ ರೂ. ನೀರಿನ ಹೊಸ ಯೋಜನೆಯ ಕಾಮಗಾರಿ ಆರಂಭಗೊಳ್ಳಲಿದೆ. ಭವಿಷ್ಯದಲ್ಲಿ ನೀರಿನ ಸಮಸ್ಯೆಯಾಗಬಾರದೆಂಬ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕಿ ಶಶಿಕಲಾ ಜೊಲ್ಲೆ ಹೇಳಿದರು.

ಪಟ್ಟಣದ ಜವಾಹರ ಜಲಾಶಯ ಪೂರ್ಣಮಟ್ಟದಲ್ಲಿ ಭರ್ತಿಯಾದ ಹಿನ್ನೆಲೆಯಲ್ಲಿ ಭಾನುವಾರ ಬಾಗಿನ ಅರ್ಪಿಸಿ ಮಾತನಾಡಿ, 55 ಲಕ್ಷ ರೂ. ಅನುದಾನದಲ್ಲಿ ಪ್ರೆಶರ್ ಫಿಲ್ಟರ್ ಕಾಮಗಾರಿಗೆ ಚಾಲನೆ ನೀಡಲಾಗಿದೆ.

ಅಲ್ಲದೆ ಪಟ್ಟಣದಲ್ಲಿ ನಿರಂತರ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಂಡಾಗಿನಿಂದ ಅನೇಕ ಸಮಸ್ಯೆಗಳು ಉಲ್ಬಣಗೊಂಡವು. ಅವುಗಳನ್ನು ಸರಿಪಡಿಸುವ ಕಾರ್ಯವೂ ನಡೆದಿದೆ. ನಗರದ ಸ್ವಚ್ಛತೆಗಾಗಿ 9.35ಲಕ್ಷ ರೂ. ಅನುದಾನದಲ್ಲಿ ಟ್ರ್ಯಾಕ್ಟರ್ ಖರೀದಿಸಲಾಗಿದೆ. ಕ್ಷೇತ್ರದ ಅಭಿವೃದ್ಧಿಗಾಗಿ ಮುಂದಿನ ದಿನಗಳಲ್ಲೂ ಇನ್ನಷ್ಟ್ಟು ಅನುದಾನ ತಂದು ಜನಪರ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದರು.

ನಗರಸಭೆ ಅಧ್ಯಕ್ಷೆ ಸೋನಲ್ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ, ಸ್ಥಾಯಿ ಸಮಿತಿ ಚೇರ್ಮನ್ ಡಾ. ಜಸರಾಜ ಗಿರೆ, ಪೌರಾಯುಕ್ತ ಗಣಪತಿ ಪಾಟೀಲ, ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡಾ ಪಾಟೀಲ, ಉಪಾಧ್ಯಕ್ಷ ಪವನಕುಮಾರ ಪಾಟೀಲ, ಸುನೀಲ ಪಾಟೀಲ, ಪ್ರವೀಣ ಶಹಾ, ಉಮೇಶ ಯರನಾಳಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net