

ವಿಜಯಪುರ: ನಿರಂತರ ಪ್ರಾಮಾಣಿಕ ಪ್ರಯತ್ನ, ಶ್ರದ್ಧೆ, ಭಕ್ತಿಯಿಂದ ಅಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಜಶೇಖರ ಬೆನಕನಹಳ್ಳಿ ಹೇಳಿದರು.
ಇಲ್ಲಿನ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯ ಹಾಗೂ ಶಿಕ್ಷಣ ಮತ್ತು ಕ್ರೀಡಾ ವಿಜ್ಞಾನ ವಿಭಾಗದ ಸಹಯೋಗದಲ್ಲಿ ಹಾಕಿ ಮಾಂತ್ರಿಕ ಧ್ಯಾನ್‌ಚಂದ್ ಅವರ ಜನ್ಮದಿನ ನಿಮಿತ್ತ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಕ್ರೀಡಾಮನೋಭಾವ ಮುಖ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಮಾತನಾಡಿ, ದೈಹಿಕ ಕ್ಷಮತೆ, ಮಾನಸಿಕ ಸ್ಥೆÊರ್ಯ ಒಂದಿದ್ದರೆ ಜೀವನ ಕಟ್ಟಿಕೊಳ್ಳಲು ಕ್ರೀಡೆ ಸೂರ್ತಿಯಾಗಲಿದೆ ಎಂದಂರು.
ಪ್ರಾಧ್ಯಾಪಕ ಡಾ.ಶ್ರೀನಿವಾಸ, ಡಾ.ರಮೇಶ್ ಸೋನಕಾಂಬಳೆ, ಡಾ.ವಿಷ್ಣು ಶಿಂಧೆ, ಡಾ.ಎಂ.ಪಿ.ಬಳಿಗಾರ ಮತ್ತು ಡಾ.ವಿಶ್ವನಾಥ ನಡಕಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಅಧ್ಯಯನ ಕ್ರೀಡಾ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ರಾಜಕುಮಾರ ಮಾಲಿಪಾಟೀಲ ಸ್ವಾಗತಿಸಿದರು. ಡಾ.ಜ್ಯೋತಿ ಉಪಾಧ್ಯೆ ಪರಿಚಯಿಸಿದರು. ಡಾ.ಹನುಮಂತಯ್ಯ ಪೂಜಾರಿ ವಂದಿಸಿದರು. ಡಾ.ಆಶ್ವಿನಿ ಕೆ.ಎನ್.ನಿರೂಪಿಸಿದರು.