ನಿರಂತರ ಮಳೆ ಹಿನ್ನಲೆಯಲ್ಲಿ ಶಾಲಾ-ಕಾಲೇಜ್‌ಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

1PGEB_j5_400x400
Published on

ಹಾವೇರಿ: ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವದರಿಂದ ಜುಲೈ 24 ರಂದು ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ರಘುನಂದನ ಮೂರ್ತಿ ಭಾನುವಾರ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜು. 24ರಂದು ಇದೇ ರೀತಿ ಮಳೆ ಸುರಿಯುವ ಸಂಭವ ಇದೆ. ಆದ್ದರಿಂದ ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಒಂದು ದಿನ ಮಾತ್ರ ಜಿಲ್ಲೆಯ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net