ನಿರಂತರ ಧರ್ಮ ಜಾಗೃತಿ

New Ramakrishna new
Published on

ಹುಬ್ಬಳ್ಳಿ : ರಾಮಕೃಷ್ಣ ವಿವೇಕಾನಂದ ಆಶ್ರಮದಿಂದ ನಿರಂತರವಾಗಿ ಧರ್ಮ ಜಾಗೃತಿ ಮಾಡಲಾಗುತ್ತಿದೆ ಎಂದು ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹೇಳಿದರು.

ಶರನ್ನವರಾತ್ರಿ ಅಂಗವಾಗಿ ಆಶ್ರಮದಲ್ಲಿ ಹಮ್ಮಿಕೊಂಡಿರುವ ಧಾರ್ವಿುಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇವರನ್ನು ನಂಬದೆ ದೇವರಿಗೆ ಕೈ ಮುಗಿಯದವರು ಯಾರೂ ಇಲ್ಲ. ಈ ಭಾಗದಲ್ಲಿ ಶರನ್ನವರಾತ್ರಿ ಉತ್ಸವದ ಮೂಲಕ ಧಾರ್ವಿುಕ ಆಚರಣೆ ಹಾಗೂ ಆಧ್ಯಾತ್ಮಿಕ ಮನೋಭಾವ ಹೆಚ್ಚಿಸುವ ಕಾರ್ಯಕ್ರಮವನ್ನು ರಾಮಕೃಷ್ಣ ವಿವೇಕಾನಂದ ಆಶ್ರಮದಿಂದ ಸತತವಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಅತಿಥಿಯಾಗಿದ್ದ ಉದ್ಯಮಿ ಸಂತೋಷ ಆರ್. ಶೆಟ್ಟಿ ಮಾತನಾಡಿದರು. ಶ್ರೀ ಸ್ವಾಮಿ ತೇಜಸಾನಂದಜೀ ಮಹಾರಾಜ, ಪಾಲಿಕೆ ಸದಸ್ಯ ಉಮೇಶಗೌಡ ಕೌಜಗೇರಿ, ಗುರುರಾಜ ಹಾಗೂ ಇತರರು ಉಪಸ್ಥಿತರಿದ್ದರು.

ಡಾ. ವಿನಾಯಕ ಕುಲಕರ್ಣಿ ನಿರೂಪಿಸಿದರು. ಡಾ ನಾಗಲಿಂಗ ಮುರಗಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net