ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ Engineer Suicide; ಕಾರಣ ನಿಗೂಢ

ShankarGowda Patil
Published on

ಗದಗ: ಗುತ್ತಿಗೆದಾರ ಸಚಿನ್​ ಪಾಂಚಾಳ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ (Engineer) ಒಬ್ಬರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಗದಗದಲ್ಲಿ ಬಂದಿದೆ.

ಗದಗ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್ ನಲ್ಲಿ  ಈ ಘಟನೆ ನಡೆದಿದ್ದು, ಮೃತರನ್ನು ಶಂಕರ್​ಗೌಡ ಪಾಟೀಲ್ (54) ಎಂದು ಗುರುತಿಸಲಾಗಿದೆ. ಇವರು ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರಲ್ಲಿ ಕೆಲಸ ಮಾಡುತ್ತಿದ್ದರು.

ಬೆಳಗ್ಗೆ 7:30ರ ಸುಮಾರಿಗೆ ಶಂಕರ್​ಗೌಡ ಪಾಟೀಲ್​ ಮನೆಯಿಂದ ಹೊರಟಿದ್ದು, ಪಲ್ಲವಿ ಲಾಡ್ಜ್‌ನಲ್ಲಿ ರೂಂ ನಂಬರ್‌ 513ಅನ್ನು ಬಾಡಿಗೆಗೆ ಪಡೆದಿದ್ದಾರೆ. ಸುಮಾರು ಗಂಟೆಗಳ ಕಾಲ ರೂಮಿನಿಂದ ಹೊರಬಾರದಿರುವುದನ್ನು ಗಮನಿಸಿದ ಲಾಡ್ಜ್​ ಸಿಬ್ಬಂದಿ ಪರಿಶೀಲಿಸಿದಾಗ ಶಂಕರ್​ಗೌಡ ಪಾಟೀಲ್​ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತ್ಮಹತ್ಯೆ ಹಿಂದಿನ ಕಾರಣವನ್ನು ಹುಡುಕುತ್ತಿದ್ದಾರೆ. ಈಗಾಗಲೇ ಗುತ್ತಿಗೆದಾರ ಸಚಿನ್​ ಆತ್ಮಹತ್ಯೆಯಿಂದ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿರುವ ಕಾಂಗ್ರೆಸ್ ಸರ್ಕಾರವು ಇದೀಗ ಮತ್ತೊಮ್ಮೆ ಪೇಚಿಗೆ ಸಿಲುಕಿದ್ದು, ಈ ವಿಚಾರ ವಿಪಕ್ಷಗಳಿಗೆ ಸರ್ಕಾರದ ಮೇಲೆ ಚಾಟಿ ಬೀಸಲು ಮತ್ತೊಂದು ಅಸ್ತ್ರ ಸಿಕ್ಕಂತಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net