ಒಳಗುತ್ತಿಗೆ ನೌಕರ ಬೇಡಿಕೆ ಈಡೇರಿಸಿ

24SND-01
Published on

ಸಿಂಧನೂರು: ನೌಕರಿ ಕಾಯಂಗೊಳಿಸುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಒಳಗುತ್ತಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಬೆಂಬಲಿಸಿ ತಾಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡಗೆ ಆಯುಷ್ ವೈದ್ಯರು ಮನವಿ ಸಲ್ಲಿಸಿದರು. ರಾಜ್ಯದಲ್ಲಿ 30 ಸಾವಿರ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋವಿಡ್ ಸಂದರ್ಭ ಮನೆಮನೆ ಭೇಟಿ, ವ್ಯಾಕ್ಸಿನೇಷನ್, ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದು ಸೇರಿದಂತೆ ಹಲವು ಕೆಲಸಗಳನ್ನು ನಿರ್ವಹಿಸಿದರೂ ಬೇಡಿಕೆ ಈಡೇರಿಸುತ್ತಿಲ್ಲ. ಪ್ರವಾಸ ಭತ್ಯೆ, ದಿನಭತ್ಯೆ ಪಾವತಿಸುತ್ತಿಲ್ಲ. ಕೂಡಲೇ ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಡಾ. ಮಂಜುನಾಥ, ಇಂದಿರಾ, ಹಸೀನಾ, ಮಂಜುನಾಥ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net