

ಶಿರಸಿ: ರಸ್ತೆ ದಾಟುತ್ತಿದ್ದ ಪಾದಾಚಾರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಘಟನೆ ನಗರದ ಹುಬ್ಬಳ್ಳಿ ರಸ್ತೆಯ ವಿವೇಕಾನಂದ ನಗರದಲ್ಲಿ ಸೋಮವಾರ ನಡೆದಿದೆ.
ಕಸ್ತೂರಬಾ ನಗರದ ಲಮಾಣಿ ಓಣಿಯ ನಿವಾಸಿ, ಗುತ್ತಿಗೆದಾರ ಕುಬೇರ ರಾಮಪ್ಪ ಪೂಜಾರ (46) ಮೃತಪಟ್ಟ ದುರ್ದೈವಿ.
ಮೃತನು ವಿವೇಕಾನಂದ ನಗರದ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ.ತಕ್ಷಣ ಸ್ಥಳೀಯರು ಆಸ್ಪತ್ರೆಗೆ ಧಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ವಿಡಿಯೋ ಪಕ್ಕದ ಅಂಗಡಿಯೊಂದರ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದ್ದು, ವೈರಲ್ ಆಗಿದೆ.
ಇದನ್ನೂ ಓದಿ: ಹೆರಿಗೆ ಕೋಣೆಗಳಾದ ಕಡಲ ತೀರಗಳು