ಗುತ್ತಿಗೆದಾರರ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

Contractors Executive Board Meeting Mandya
Published on

ಮಂಡ್ಯ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ 2 ತಿಂಗಳು ಕಳೆದಿವೆ. ಪಿಡಬ್ಲುೃಡಿ ಕಚೇರಿಯಲ್ಲಿ ಇರುವಂತಹ ಸಮಸ್ಯೆಯನ್ನು ಪರಿಹರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಭರವಸೆ ನೀಡಿದರು.

ನಗರದ ಪಿಡಬ್ಲುೃಡಿ ಕಚೇರಿಯ ಆವರಣದಲ್ಲಿ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಹಾಗೂ ಸಿವಿಲ್ ಗುತ್ತಿಗೆದಾರರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕಾರಿ ಮಂಡಳಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕಂಟ್ರಾಕ್ಟರ್ ಸಮಸ್ಯೆ ಹಲವು ವರ್ಷಗಳಿಂದ ಬಗೆಹರಿಯದೇ ಹಾಗೆ ಉಳಿದಿದೆ. ಹಿಂದಿನ ಸರ್ಕಾರ ಸಾಕಷ್ಟು ಹಣವನ್ನು ಬಾಕಿ ಉಳಿಸಿಕೊಂಡಿದೆ. ಆದ್ದರಿಂದ ಗುತ್ತಿಗೆದಾರರ ಬಿಲ್ ಪಾವತಿಸಲು ತಿಳಿಸಿದ್ದೇನೆ ಎಂದರು.

ಮುಡಾ ಅಧ್ಯಕ್ಷ ನಯೀಂ, ತಾಪಂ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಟಿ.ಹನುಮಂತು, ಪಿಡಬ್ಲುೃಡಿ ಕಾರ್ಯಪಾಲಕ ಇಂಜಿನಿಯರ್ ಎಚ್.ಆರ್.ಹರ್ಷ, ವಿಶ್ವೇಶ್ವರಯ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ನಂಜುಂಡೇಗೌಡ, ಮಂಜುನಾಥ್, ನವೀನ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net