ಮಲೇರಿಯಾ ಮುಕ್ತ ರಾಜ್ಯಕ್ಕೆ ಸಹಕರಿಸಿ

MALARIA WORKSHOP
Published on

ಮುಂಡರಗಿ: ಕರ್ನಾಟಕವನ್ನು ಮಲೇರಿಯಾ ಮುಕ್ತ ರಾಜ್ಯವನ್ನಾಗಿ ಮಾಡುವ ಗುರಿ ಹೊಂದಿದ್ದು, ಪ್ರತಿಯೊಬ್ಬರು ಕೈಜೋಡಿಸಬೇಕು.

ಸೊಳ್ಳೆ ಕಚ್ಚುವುದರಿಂದ ಜ್ವರ ಮೊದಲಾದ ಲಕ್ಷಣಗಳು ಕಂಡು ಬಂದ ತಕ್ಷಣ ಸರ್ಕಾರಿ ಆಸ್ಪತ್ರೆಗೆ ತೆರಳಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹಿರೇವಡ್ಡಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಿತಿನ್ ಸ್ವರೂಪ ಹೇಳಿದರು.

ಪಟ್ಟಣದ ವಿ.ಜಿ. ಲಿಂಬಿಕಾಯಿ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಶಾಲಾ ಶಿಕ್ಷಕರಿಗಾಗಿ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಕ್ಷೇತ್ರ ಸಮನ್ವಯಾಧಿಕಾರಿ ಗಂಗಾಧರ ಅಣ್ಣಿಗೇರಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಭಾಗ್ಯ. ಆರೋಗ್ಯದ ಬಗ್ಗೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು. ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಬೇಕು ಎಂದರು.

ಕೀಟಶಾಸ್ತ್ರಜ್ಞೆ ಅನ್ನಪೂರ್ಣಾ ಶೆಟ್ಟರ ಅವರು ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಾದ ಮಲೇರಿಯಾ, ಡೆಂೆ, ಚಿಕುನ್‌ಗುನ್ಯಾ, ಆನೆಕಾಲು ರೋಗ, ಮಿದುಳುಜ್ವರ ಹಾಗೂ ಜಿಕಾ ರೋಗಗಳು ಹಾಗೂ ಮುನ್ನೆಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯಶಿಕ್ಷಕ ಎಂ.ಬಿ. ನಾಗರಹಳ್ಳಿ, ಎಂ.ಎಸ್. ಸವದತ್ತಿ, ಮನೋಹರ ಎಸ್, ಮಹಾಂತೇಶ ಕೊನೇರಿ ಇತರರು ಇದ್ದರು.

ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎಂ.ಎಸ್. ಸಜ್ಜನರ ಪ್ರಾಸ್ತವಿಕವಾಗಿ ಮಾತನಾಡಿದರು. ಹನುಮರೆಡ್ಡಿ ಇಟಗಿ ಸ್ವಾಗತಿಸಿದರು. ಬಿ.ಆರ್.ಪಿ. ಚಿದಾನಂದ ವಡ್ಡರ ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ವಿ. ಬಡಿಗೇರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net