

ಅರಕಲಗೂಡು: ಸಾರ್ವಜನಿಕರು ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂೆ ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪುಷ್ಪಲತಾ ತಿಳಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗ ನಿಯಂತ್ರಣಾಧಿಕಾರಿ ಕಚೇರಿ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಡೆಂೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಳೆ ಆರಂಭವಾದ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡಲಿದ್ದು, ಡೆಂೆ, ಚಿಕನ್ ಗುನ್ಯಾ ರೋಗದ ಬಗ್ಗೆ ಎಚ್ಚರ ವಹಿಸಬೇಕು. ರೋಗದಿಂದ ಸಾವು ಸಂಭವಿಸದಂತೆ ಸಿಬ್ಬಂದಿ ಎಚ್ಚರ ವಹಿಸಬೇಕು.
ತಾಲೂಕಿನಲ್ಲಿ 28 ಡೆಂೆ ಪ್ರಕರಣಗಳು ಕಂಡುಬಂದಿದ್ದು, ಇವರಿಗೆ ಸೂಕ್ತ ಚಿಕಿತ್ಸೆ ನೀಡುವಲ್ಲಿ ಇಲಾಖೆ ಕಾರ್ಯಪ್ರವೃತ್ತವಾಗಿದೆ. ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು ರೋಗದ ಪ್ರಮುಖ ಲಕ್ಷಣಗಳಾಗಿದೆ. ಡೆಂೆಗೆ ನಿರ್ದಿಷ್ಟ ಔಷಧ ಇಲ್ಲದಿರುವುದರಿಂದ ರೋಗ ಬಾರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಕೀಟಶಾಸ್ತ್ರಜ್ಞ ರಾಜೇಶ್ ಕುಲಕರ್ಣಿ ಸೊಳ್ಳೆಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ತಾಪಂ ಇಒ ಪ್ರಕಾಶ್, ಆರೋಗ್ಯ ನಿರೀಕ್ಷಕ ಚಂದ್ರೇಗೌಡ, ವಿವಿಧ ಗ್ರಾಪಂನ ಪಿಡಿಒಗಳು ಇದ್ದರು.
ರೋಗ ನಿಯಂತ್ರಣ ಕ್ರಮಗಳು: ಸೊಳ್ಳೆಗಳ ನಿಯಂತ್ರಣದಿಂದ ಮಾತ್ರ ಡೆಂೆ ನಿಯಂತ್ರಣ ಸಾಧ್ಯವಾಗಿದೆ. ಹಲವು ದಿನದಿಂದ ಒಂದೇ ಕಡೆ ನೀರು ಶೇಖರಣೆಯಾಗದಂತೆ, ಗುಂಡಿ, ಚರಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಶೇಖರಣೆ ಮಾಡುವ ನೀರಿನ ಸೊಳ್ಳೆಗಳು ಒಳನುಸುಳದಂತೆ ನೋಡಿಕೊಳ್ಳಬೇಕು. ಟೈರು, ಎಳೆನೀರಿನ ಚಿಪ್ಪು, ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು.