ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಸಹಕರಿಸಿ

oppo_2
ಮದ್ದೂರು ತಾಲೂಕಿನ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಕೆ.ಟಿ.ಬಾಬು 60 ವಿದ್ಯಾರ್ಥಿಗಳಿಗೆ ಟ್ರಾೃಕ್ ಶೂಟ್ ವಿತರಿಸಿದರು. ಸಂತೋಷ್ ಕೊಟ್ಟಿಗೆಯಾರ್, ಸಾವಿತ್ರಿ ರಮೇಶ್, ಕುಮಾರ್‌ಕೊಪ್ಪ, ಪರ್ವಿಜ್ ಅಹಮದ್, ರವಿ, ಬಿ.ಕೆ.ಗೌರಮ್ಮ, ಆರ್.ರವಿ, ವಿಜಯಮ್ಮ, ಎ.ಸಿ.ವಿದ್ಯಾಶ್ರೀ ಇದ್ದರು.
Published on

ಮದ್ದೂರು: ಸರ್ಕಾರಿ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಹಳೆಯ ವಿದ್ಯಾರ್ಥಿಗಳು, ಸಂಘ, ಸಂಸ್ಥೆಗಳು ಹಾಗೂ ದಾನಿಗಳು ಅಗತ್ಯ ಸಹಕಾರ ನೀಡಬೇಕೆಂದು ಸಮಾಜ ಸೇವಕ ಕೆ.ಟಿ.ಬಾಬು ತಿಳಿಸಿದರು.

ತಾಲೂಕಿನ ಕೊಪ್ಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಬುಧವಾರ 60 ವಿದ್ಯಾರ್ಥಿಗಳಿಗೆ ಟ್ರಾೃಕ್ ಶೂಟ್ ವಿತರಿಸಿ ಮಾತನಾಡಿದರು. ನನ್ನ ಅಣ್ಣ ನಿವೃತ್ತ ಇಂಜಿನಿಯರ್ ಕೆ.ಟಿ.ಜಗದೀಶ್, ಅತ್ತಿಗೆ ನಂದಾ ಅವರು ಅಮೆರಿಕದಲ್ಲಿ ವಾಸವಿದ್ದು, ಅವರು ಸರ್ಕಾರಿ ಶಾಲೆಗಳನ್ನು ಉಳಿಸಬೇಕೆಂಬುವ ಬಗ್ಗೆ ತುಂಬ ಆಸಕ್ತಿ ಹೊಂದಿದ್ದು, ಅವರ ಮಾರ್ಗದರ್ಶನದಲ್ಲಿ ಹಾಗೂ ಅವರ ಹಣದಲ್ಲಿ ಇಂತಹ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತಿದ್ದೇನೆ ಮತ್ತು ಸರ್ಕಾರಿ ಶಾಲೆಗಳಿಗೆ ಅಗತ್ಯ ಸಹಕಾರ ನೀಡುತ್ತಿದ್ದೇನೆ ಎಂದು ಕೆ.ಟಿ.ಬಾಬು ತಿಳಿಸಿದರು.

ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ನುರಿತ ಶಿಕ್ಷಕರಿಂದ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದರಿಂದ ಪಾಲಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳು ಸೇರಿಸುವ ಮೂಲಕ ಸರ್ಕಾರಿ ಉಳಿವಿಗೆ ಮುಂದಾಗಬೇಕೆಂದು ಮನವಿ ಮಾಡಿದರು.

ಸರ್ಕಾರಿ ಶಾಲೆಯಲ್ಲಿ ಓದಿದ ಹಲವಾರು ವಿದ್ಯಾರ್ಥಿಗಳು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಹಾಗೂ ಉನ್ನತ ಹುದ್ದೆಗಳನ್ನು ಅಲಂಕರಿಸಿ ಸಮರ್ಥವಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಶಾಲೆಗಳು ಎಂದರೆ ಕೀಳರಿಮೆ ಬೇಡ ಎಂದರು.

ಇತ್ತೀಚಿನ ದಿನಗಳಲ್ಲಿ ಪಾಲಕರಲ್ಲಿ ಖಾಸಗಿ ಶಾಲೆಗಳು ವ್ಯಾಮೋಹದಿಂದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿ ಮುಚ್ಚುವ ಹಂತ ತಲುಪುತ್ತಿರುವುದು ಬೇಸರದ ಸಂಗತಿಯಾಗಿದೆ. ಸರ್ಕಾರಿ ಶಾಲೆಗಳನ್ನು ಉಳಿಸಲು ದೊಡ್ಡ ಪ್ರಮಾಣದಲ್ಲಿ ಅಭಿಯಾನ ಆರಂಭವಾಗಬೇಕಾಗಿದೆ. ಈ ಮೂಲಕ ಸರ್ಕಾರ ಶಾಲೆಗಳ ಉಳಿವಿಗೆ ಪ್ರತಿಯೊಬ್ಬರೂ ಮುಂದಾಗಬೇಕಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಸರ್ಕಾರಿ ಶಾಲೆಗಳ ಉಳಿವಿಗೆ ನಾನು ಕೂಡ ಅಗತ್ಯ ಸಹಕಾರ ನೀಡುತ್ತೇನೆ ಮತ್ತು ಸರ್ಕಾರಿ ಶಾಲೆಗಳಿಗೆ ಮಕ್ಕಳು ಸೇರಿಸುವಂತೆ ಪಾಲಕರಲ್ಲಿ ಅರಿವು ಮೂಡಿಸುವಂತಹ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇನೆ ಎಂದರು.

ಗ್ರಾಪಂ ಅಧ್ಯಕ್ಷ ಸಂತೋಷ್ ಕೊಟ್ಟಿಗೆಯಾರ್, ಉಪಾಧ್ಯಕ್ಷೆ ಸಾವಿತ್ರಿ ಸುರೇಶ್, ಸದಸ್ಯರಾದ ಕುಮಾರ್‌ಕೊಪ್ಪ, ಪರ್ವಿಜ್ ಅಹಮದ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರವಿ, ಮುಖ್ಯಶಿಕ್ಷಕರಾದ ಬಿ.ಕೆ.ಗೌರಮ್ಮ, ಆರ್.ರವಿ, ಸಹ ಶಿಕ್ಷಕರಾದ ವೈ.ವಿ.ವಿಜಯಮ್ಮ, ಎ.ಸಿ.ವಿದ್ಯಾಶ್ರೀ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net