ಸರ್ಕಾರಿ ಶಾಲೆಗಳ ಉಳಿವಿಗೆ ಸಹಕರಿಸಿ

1KMD-2
ಕಾರ್ಕಳ್ಳಿ ಗ್ರಾಮದ ಸರ್ ಎಂ. ವಿಶ್ವೇಶ್ವರಯ್ಯ ಯುವಕರ ಬಳಗದ 9ನೇ ವಾರ್ಷಿಕೋತ್ಸವದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಶಾಲಾ ಬ್ಯಾಗ್ ಗಳನ್ನು ವಿತರಣೆ ಮಾಡಲಾಯಿತು.
Published on

ಕೆ.ಎಂ.ದೊಡ್ಡಿ: ಸಮೀಪದ ಕಾರ್ಕಳ್ಳಿ ಗ್ರಾಮದ ಸರ್ ಎಂ. ವಿಶ್ವೇಶ್ವರಯ್ಯ ಯುವಕರ ಬಳಗದ 9ನೇ ವಾರ್ಷಿಕೋತ್ಸವದ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಬುಧವಾರ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಣೆ ಮಾಡಲಾಯಿತು.
ಯುವಕರ ಬಳಗದ ಪದಾಧಿಕಾರಿಗಳು ಗ್ರಾಮದ ಸರ್ಕಾರಿ ಶಾಲೆಯನ್ನು ಅಭಿವೃದ್ಧಿಗೊಳಿಸುವ ಹಾಗೂ ಸರ್ಕಾರಿ ಶಾಲಾ ಮಕ್ಕಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮಾದರಿ ಕಾರ್ಯವನ್ನ ಕೈಗೊಂಡು ಗಮನ ಸೆಳೆದಿದ್ದಾರೆ.
ಭಾರತೀ ಪ್ರೌಡಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಮಾಯಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳು ಹೆಚ್ಚುತ್ತಿದ್ದಂತೆ ಸರ್ಕಾರಿ ಶಾಲೆಗಳಲ್ಲಿ ಶಾಲಾ ಮಕ್ಕಳ ದಾಖಲಾತಿ ಕಡಿಮಯಾಗಿ ಶಾಲೆಗಳು ಮುಚ್ಚುವ ಹಂತ ತಲುಪುತ್ತಿವೆ. ಸ್ಥಳೀಯ ಗ್ರಾಮಗಳಲ್ಲಿನ ಗ್ರಾಮಸ್ಥರು ಸರ್ಕಾರಿ ಶಾಲೆಗಳ ಉತ್ತೇಜನಕ್ಕಾಗಿ, ಶಾಲಾ ಬೆಳೆವಣಿಗೆಗೆ ಪೂರಕವಾಗಿ ಪಾಲಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಪಾಲಕರಿಗೆ ಮನವಿ ಮಾಡಿದರು.
ಇತ್ತೀಚಿನ ದಿನಗಳಲ್ಲಿ ಸರ್ಕಾರ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅಲ್ಲದೆ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಹಲವಾರು ಜನಪ್ರಿಯ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಲಾಗುತ್ತಿದ್ದು ಸರ್ಕಾರಿ ಶಾಲೆ ಉಳಿವಿಗೆ ಶ್ರಮಿಸಿ ಎಂದರು.
ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಜೊತೆಗೆ ಕಲೆ ಸಾಹಿತ್ಯ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹಿಸಬೇಕು. ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಗ್ರಾಮಸ್ಥರು ಕೈಜೋಡಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಶಾಲೆಯ ಹಿರಿಯ ವಿದ್ಯಾರ್ಥಿ ಉಮೇಶ್ ಶಾಲಾ ಮಕ್ಕಳ ಕಲಿಕೆಗಾಗಿ ಗ್ರೀನ್ ಬೋರ್ಡ್ ನೀಡಿದರು. ಶಿಕ್ಷಣ ಸಂಯೋಜಕ ನಂದೀಶ್, ಸರ್ ಎಂ. ವಿಶ್ವೇಶ್ವರಯ್ಯ ಯುವಕರ ಬಳಗದ ಅಧ್ಯಕ್ಷ ಪ್ರಜ್ವಲ್, ಉಪಾಧ್ಯಕ್ಷ ಕೆ.ಪಿ.ರಾಕೇಶ್ ಖಜಾಂಚಿ ಮಹೇಶ್, ಕಾರ್ಯದರ್ಶಿ ಗಿರೀಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಸತೀಶ್, ಅನಿತಾ ಕೃಷ್ಣ, ಎಸ್‌ಡಿಎಂಸಿ ಅಧ್ಯಕ್ಷ ಕಾಳೇಗೌಡ, ಶಿಕ್ಷಕಾರದ ಭಾನುಮತಿ,ಶಶಿರೇಖಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net