ದೇಶಕ್ಕೆ ಕನ್ನಡಿಗರ ಕೊಡುಗೆ ದೊಡ್ಡದು

HNR
Published on

ಹೊನ್ನಾವರ: ದೇಶಕ್ಕೆ ಕನ್ನಡಿಗರ ಕೊಡುಗೆ ದೊಡ್ಡದಿದೆ. ಕನ್ನಡವನ್ನು ಮಾತನಾಡುವ ಮೂಲಕ ನಾಡಿಗೆ ಗೌರವ ತೋರಬೇಕು ಎಂದು ಉದ್ಯಮಿ ಯಧುವೀರ ಶ್ರೀಕಾಂತ ನಾಯ್ಕ ಹೇಳಿದರು.

ಪಟ್ಟಣದ ಪೊಲೀಸ್ ಮೈದಾನದಲ್ಲಿ ಜಯ ಕರ್ನಾಟಕ ಜನಪರ ವೇದಿಕೆಯ ವತಿಯಿಂದ ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿವಿಧ ಕ್ಷೇತ್ರದಲ್ಲಿ ಸಾಧನೆ ಜತೆಗೆ ಹಣಕಾಸು ಸಂಸ್ಥೆಯನ್ನು ಹೇಗೆ ನಡೆಸಬೇಕು ಎಂಬುದನ್ನು ದೇಶಕ್ಕೆ ತೋರಿಸಿಕೊಟ್ಟವರು ಕನ್ನಡಿಗರು ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಉದ್ಯಮಿ ಮಂಜುನಾಥ ನಾಯ್ಕ ಮಾತನಾಡಿ, ರಾಜ್ಯೋತ್ಸವದಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ ಎಂದರು.

ಪ.ಪಂ. ಮುಖ್ಯಾಧಿಕಾರಿ ಏಸು ಬೆಂಗಳೂರು ಮಾತನಾಡಿ, ಕನ್ನಡಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಿದಾಗ ಮಾತ್ರ ಕನ್ನಡ ಉಳಿಸಿ-ಬೆಳೆಸಲು ಸಾಧ್ಯ ಎಂದರು.

ಕುಮಟಾ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಭುವನ ಭಾಗ್ವತ್, ವಂದೂರು ವಿಎಸ್‌ಎಸ್ ಅಧ್ಯಕ್ಷ ವಿಶಾಲ್ ಭಟ್, ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಸಂದೀಪ ಪೂಜಾರಿ, ಗುತ್ತಿಗೆದಾರ ಹೆನ್ರಿ ಲಿಮಾ ಮಾತನಾಡಿದರು.

ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಪ್ರದೀಪ ಶೆಟ್ಟಿ ಸ್ವಾಗತಿಸಿದರು. ಸಂಘದ ತಾಲೂಕು ಅಧ್ಯಕ್ಷ ಆರ್.ಕೆ. ಮೇಸ್ತ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಜೊಜ್ ರೋಡ್ರಿಗಿಸ್, ಮಂಜುನಾಥ ನಾಯ್ಕ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net