ಶಿಕ್ಷಣ ಕ್ಷೇತ್ರಕ್ಕೆ ಹವಳೆ ಕೊಡುಗೆ ಅನನ್ಯ

19-11-Shiva-6
ರಾಯಚೂರಿನ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯಗುರು ರಾಮಣ್ಣ ಹವಳೆಯನ್ನು ತಾರಾನಾಥ ಶಿಕ್ಷಣ ಸಂಸ್ಥೆಯಿಂದ ಭಾನುವಾರ ಸನ್ಮಾನಿಸಿ, ಗೌರವಿಸಲಾಯಿತು. ಸಂಸ್ಥೆ ಅಧ್ಯಕ್ಷ ಪಾರಸಮಲ್ ಸುಖಾಣಿ, ಕಾರ್ಯದರ್ಶಿಗಳಾದ ಅಂಬಾಪತಿ ಪಾಟೀಲ್, ಶ್ರೀನಿವಾಸ ನಂದಾಪುರ ಇದ್ದರು.
Published on

ರಾಯಚೂರು: ನಿವೃತ್ತ ಮುಖ್ಯಗುರು ರಾಮಣ್ಣ ಹವಳೆ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅನನ್ಯವಾಗಿದ್ದು, ಅವರಿಗೆ ವೃತ್ತಿಯ ಮೇಲೆ ಇದ್ದ ಶ್ರದ್ಧೆಯಿಂದಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿದ್ದರು ಎಂದು ತಾರಾನಾಥ ಶಿಕ್ಷಣ ಸಂಸ್ಥೆ ಅಧ್ಯಕ್ಷ ಪಾರಸಮಲ್ ಸುಖಾಣಿ ಹೇಳಿದರು.
ಸ್ಥಳೀಯ ಎಸ್‌ಎಸ್‌ಆರ್‌ಜಿ ಮಹಿಳಾ ಕಾಲೇಜಿನಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮಣ್ಣ ಹವಳೆಗೆ ತಾರಾನಾಥ ಶಿಕ್ಷಣ ಸಂಸ್ಥೆಯಿಂದ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಕರಾಗಿ ಕೆಲಸ ಮಾಡುವುದರ ಜತೆಗೆ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿದ್ದರು ಎಂದರು.
ಹಿರಿಯ ಸಾಹಿತಿ ವೀರಹನುಮಾನ ಮಾತನಾಡಿ, ಶಿಕ್ಷಕರಾಗಿ, ಸಾಹಿತಿಗಳಾಗಿ, ಸಂಶೋಧಕರಾಗಿ, ವಿಮರ್ಷಕರಾಗಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡಿರುವ ರಾಮಣ್ಣ ಹವಳೆಗೆ ರಾಜ್ಯೋತ್ಸವ ಪ್ರಶಸ್ತಿ ಬಂದಿರುವುದು ಜಿಲ್ಲೆಗೆ ದೊರೆತ ಹೆಮ್ಮೆಯಾಗಿದೆ ಎಂದು ಹೇಳಿದರು.
ನಿವೃತ್ತ ಮುಖ್ಯಗುರು ರಾಮಣ್ಣ ಹವಳೆ ಸನ್ಮಾನ ಸ್ವೀಕರಿಸಿ ಮಾತನಾಡಿ, ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾದ ವೃತ್ತಿಯಾಗಿದ್ದು, ನಾನು ಕಲಿತ ತಾರಾನಾಥ ಶಿಕ್ಷಣ ಸಂಸ್ಥೆಯಿಂದ ಸನ್ಮಾನಗೊಳ್ಳುತ್ತಿರುವುದು ಅತ್ಯಂತ ಖುಷಿ ತಂದಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಅಂಬಾಪತಿ ಪಾಟೀಲ್, ಪದಾಕಾರಿಗಳಾದ ಶ್ರೀನಿವಾಸ ನಂದಾಪುರ, ಪುರುಷೋತ್ತಮ ಇನ್ನಾನಿ, ರಾಮಾಂಜಿನೇಯ, ಪವನಕುಮಾರ ಸುಖಾಣಿ, ಶ್ರೀಕಾಂತ, ಜಿ.ಸುರೇಶ, ಆಡಳಿತಾಕಾರಿ ಬಿ.ದೇವರೆಡ್ಡಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net