ನಿಯಂತ್ರಣ ತಪ್ಪಿ ಲಾರಿ ಪಲ್ಟಿ

010201
Published on

ಸವದತ್ತಿ: ಇಲ್ಲಿನ ಎಪಿಎಂಸಿ ಕ್ರಾಸ್ ಬಳಿ ಶನಿವಾರ ಬೆಳಗ್ಗೆ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ. ಧಾರವಾಡ-ಸವದತ್ತಿ ಮಾರ್ಗವಾಗಿ ಗೋಕಾಕ ನಗರಕ್ಕೆ ದನಗಳ ಹಿಂಡಿ ಹೊತ್ತೊಯ್ಯುತ್ತಿದ್ದ ಲಾರಿ ರಸ್ತೆಯ ಇಳಿಜಾರಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪಲ್ಟಿ ಹೊಡೆದ ಲಾರಿ ಬಳಿಕ ಹೋಟೆಲ್‌ಗೆ ಡಿಕ್ಕಿ ಹೊಡೆದಿದ್ದರಿಂದ ಗೋಡೆಗೆ ಹಾನಿಯಾಗಿದೆ. ಮುನವಳ್ಳಿ ಪಟ್ಟಣದ ಇಸ್ಮಾಯಿಲ್ ತಹಸೀಲ್ದಾರ್ ಎಂಬುವರ ಬೈಕ್ ಮೇಲೆ ಲಾರಿ ಹಾಯ್ದು ಬೈಕ್ ಜಖಂಗೊಂಡಿದೆ. ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net