

ಮೈಸೂರು: ಜನರು ಜಾಗೃತರಾದರೆ ಡೆಂೆಯಂತಹ ಮಾರಕ ರೋಗಗಳನ್ನೂ ನಿಯಂತ್ರಿಸಬಹುದು ಎಂದು ಸುಯೋಗ್ ಆಸ್ಪತ್ರೆ ಸಂಸ್ಥಾಪಕ ಡಾ.ಎಸ್.ಪಿ.ಯೋಗಣ್ಣ ಹೇಳಿದರು.
ವಿಶ್ವ ಯೋಗ ದಿನ ಹಾಗೂ ವೈದ್ಯರ ದಿನಾಚರಣೆ ಅಂಗವಾಗಿ ಜನಸೇವಕ ಯುವ ಬ್ರಿಗೇಡ್ ವತಿಯಿಂದ ನಗರದ ಮಹದೇವಪುರ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರದಲ್ಲಿ ಹೃದಯ ಸಂಬಂಧಿ ಆರೋಗ್ಯ ತಪಾಸಣೆ ಉಚಿತ ಶಿಬಿರ, ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮನೆಯ ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಮನೆಯ ಅಕ್ಕಪಕ್ಕ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಡೆಂೆ ಮಾರಕ ರೋಗ. ತೀವ್ರ ತಲೆನೋವು, ತೀವ್ರವಾದ ಸ್ನಾಯು ಅಥವಾ ಕೀಲು ನೋವು, ವಾಂತಿ, ಕಣ್ಣುನೋವು, ವಾಕರಿಕೆ ಮತ್ತು ಚರ್ಮದ ದದ್ದುಗಳು ಕಂಡಬಂದರೆ ತಕ್ಷಣ ಸಮೀಪದ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.
ಯೋಗ ಅತ್ಯಗತ್ಯ: ಜೀವದಾರ ರಕ್ತ ನಿಧಿ ನಿರ್ದೇಶಕ ಗಿರೀಶ್ ಮಾತನಾಡಿ, ದೇಹಕ್ಕೆ ಆಹಾರ ಹೇಗೆ ಅಗತ್ಯವೋ, ಹಾಗೆಯೇ ನಿತ್ಯ ಯೋಗ ಮತ್ತು ಧ್ಯಾನದ ಅಭ್ಯಾಸ ಅವಶ್ಯಕವಾಗಿವೆ. ಅಷ್ಟಾಂಗ ಯೋಗದ ಅನುಷ್ಠಾನದಿಂದ ಚಿತ್ತಚಂಚಲತೆ ನಿವಾರಣೆಯಾಗಿ ಮಾನಸಿಕ ಸ್ಥಿರತೆ, ವಿವೇಕ ಲಭಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
100ಕ್ಕೂ ಹೆಚ್ಚು ಜನರಿಗೆ ಹಿಮೋಗ್ಲೋಬಿನ್, ರಕ್ತದ ಗುಂಪು, ಸಕ್ಕರೆ ಪ್ರಮಾಣ, ಥೈರಾಯ್ಡ ಪರೀಕ್ಷೆ, ಮಧುಮೇಹ ಪರೀಕ್ಷೆ, ಅಲ್ಟ್ರಾ ಸೋನೋಗ್ರಫಿ, ಇಸಿಜಿ ಹೃದಯದ ಪರೀಕ್ಷೆ ಮಾಡಲಾಯಿತು. 30 ಜನ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು.
ಬ್ರಿಗೇಡ್ ಅಧ್ಯಕ್ಷ ಡಿ.ರಾಘವೇಂದ್ರ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಸಮರ್ಥ ಶಕ್ತಿ ಸೇವಾ ಸಂಸ್ಥೆ ಅಧ್ಯಕ್ಷೆ ಎಂ.ಮೋನಿಕಾ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಿರಣ್ ನಾಯ್ಡು, ಬಿಜೆಪಿ ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಸವಿತಾ ಪುಟ್ಟೇಗೌಡ, ಸಮಾಜ ಸೇವಕರಾದ ಕಲ್ಪನಾ, ನವೀನ ಗೌಡ ಇತರರು ಇದ್ದರು.