ಸ್ವಚ್ಚತೆ ಮೂಲಕ ಡೆಂಘೆ ನಿಯಂತ್ರಿಸಿ; ಶಾಸಕ ವೆಂಕಟರಾವ ನಾಡಗೌಡ ಸಲಹೆ

170522 Sindhanuru Dengu Awareness program
ಸಿಂಧನೂರಿನ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ಡೆಂಘೆ ಜಾಗೃತಿ ಜಾಥಾಕ್ಕೆ ಶಾಸಕ ವೆಂಕಟರಾವ ನಾಡಗೌಡ ಹಸಿರು ನಿಶಾನೆ ತೋರಿಸಿದರು.
Published on

ಸಿಂಧನೂರು: ಸ್ವಚ್ಚತೆ ಕಾಪಾಡಿಕೊಳ್ಳುವ ಮೂಲಕ ಡೆಂಘೆಯಿಂದ ದೂರವಿರಬೇಕೆಂದು ಶಾಸಕ ವೆಂಕಟರಾವ ನಾಡಗೌಡ ಹೇಳಿದರು. ರಾಷ್ಟ್ರೀಯ ಡೆಂಘೆ ದಿನಾಚರಣೆ ನಿಮಿತ್ತ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸೋಮವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಒಂದು ವಾರ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಆರೋಗ್ಯ ಇಲಾಖೆ ಮಾಡಲಿದೆ. ಮನೆ ಮತ್ತು ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ತೀವ್ರ ಜ್ವರ ಇದ್ದರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ತಾಲೂಕು ಆರೋಗ್ಯಾಧಿಕಾರಿ ಅಯ್ಯನಗೌಡ, ಡಾ.ನಾಗರಾಜ ಕಾಟ್ವಾ, ಡಾ.ಗಂಗಾಧರ ಬುರಡೆ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಂಗನಗೌಡ, ಎಸ್.ಎ.ಹಣಗಿ, ಡಾ.ಬಸವರಾಜ, ರಂಗನಾಥ ಗುಡಿ, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net