ಪಂಚ ಗ್ಯಾರಂಟಿ ಯೋಜನೆಗಳ ಸಮಾವೇಶ

2 vikram 5
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆ ಲಾನುಭವಿಗಳ ಸಮಾವೇಶವನ್ನು ಕುಂದಗೋಳದಲ್ಲಿ ಮಾ. 9 ಹಾಗೂ ಕಲಟಗಿಯಲ್ಲಿ ಮಾ. 11ರಂದು ಆಯೋಜಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಧಾರವಾಡ, ಹುಬ್ಬಳ್ಳಿ ಮತ್ತು ನವಲಗುಂದದಲ್ಲಿ ಆಯೋಜಿಸಿದ್ದ ಸಮಾವೇಶಗಳು ಯಶಸ್ವಿಯಾಗಿದ್ದು, ಮುಖ್ಯಮಂತ್ರಿ ಶ್ಲಾನೆ ವ್ಯಕ್ತಪಡಿಸಿದ್ದಾರೆ ಎಂದರು.
ಹುಬ್ಬಳ್ಳಿ, ಧಾರವಾಡ ಹಾಗೂ ನವಲಗುಂದದಲ್ಲಿ ತಲಾ 30 ರಿಂದ 40 ಸಾವಿರ ಲಾನುಭವಿಗಳು ಸೇರಿ ಕಾರ್ಯಕ್ರಮ ಯಶಸ್ವಿ ಗೊಳಿಸಿದ್ದಾರೆ. ಅದರಂತೆ ಗ್ಯಾರಂಟಿ ಸಮಾವೇಶವನ್ನು ಕುಂದಗೊಳ, ಕಲಟಗಿಯಲ್ಲಿ ನಡೆಸಲಾಗುವುದು. ಗ್ಯಾರಂಟಿ ಲಾನುಭವಿಗಳ ಜತೆಗೆ ಲಾನುಭವಿಗಳು ಪಾಲ್ಗೊಳ್ಳಬೇಕು. ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಜವಾಬ್ದಾರಿಯಿಂದ ಸಮಾವೇಶ ಯಶಸ್ವಿಗೊಳಿಸುವಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಲಾನುಭವಿಗಳ ಸಮಾವೇಶಕ್ಕೆ ತಹಸೀಲ್ದಾರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿ, ಆಯೋಜನೆಯಲ್ಲಿ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕು. ವಿವಿಧ ಗ್ರಾಮಗಳಿಂದ ಆಗಮಿಸುವ ಲಾನುಭವಿಗಳಿಗೆ ಅಗತ್ಯ ಸಾರಿಗೆ, ಕುಡಿಯುವ ನೀರು, ಉಪಹಾರ ಸೇರಿ ಮೂಲಸೌಕರ್ಯ ಕಲ್ಪಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸ್ವಾಗತಿಸಿದರು. ಪೊಲೀಸ್​ ಅಧೀಕ ಡಾ. ಗೋಪಾಲ ಬ್ಯಾಕೊಡ, ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಸೀಲ್ದಾರರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net