

ಮೈಸೂರು ನಗರದ ಚಾಮರಾಜ ಜೋಡಿ ರಸ್ತೆಯಲ್ಲಿರುವ ನವಕರ್ನಾಟಕ ಪಬ್ಲಿಕೇಷನ್ಸ್ ಪುಸ್ತಕ ಮಳಿಗೆಯಲ್ಲಿ ಜು.17 ರಂದು ಸಂಜೆ 6 ಗಂಟೆಗೆ ಸಾಹಿತಿ ಸತೀಶ್ ಚಪ್ಪರಿಕೆ ಅವರ ‘ಘಾಂದ್ರುಕ್’ ಕಾದಂಬರಿ ಕುರಿತು ಸಂವಾದ ಕಾರ್ಯಕ್ರಮ ನಡೆಯಲಿದೆ.
ಖ್ಯಾತ ವಿಮರ್ಶಕ ಓ.ಎಲ್.ನಾಗಭೂಷಣಸ್ವಾಮಿ ಅವರು ಕಾದಂಬರಿಕಾರ ಸತೀಶ್ ಚಪ್ಪರಿಕೆ ಜತೆ ಈ ಸಂವಾದ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಒಂದು ಗಂಟೆಯ ಈ ಕಾರ್ಯಕ್ರಮದಲ್ಲಿ ಸಾಹಿತ್ಯಾಸಕ್ತರು, ಸಾರ್ವಜನಿಕರು ಕೂಡ ಲೇಖಕರ ಜತೆ ಪ್ರಶ್ನೋತ್ತರದಲ್ಲಿ ಭಾಗಿಯಾಗಬಹುದು. ಮೂರು ವಾರಗಳ ಹಿಂದೆ ಬೆಂಗಳೂರಿನಲ್ಲಿ ಬಿಡುಗಡೆಯಾದ ಘಾಂದ್ರುಕ್ ಕಾದಂಬರಿ ನವೋತ್ತರದ ನವ್ಯವನ್ನು ಮೀರಿದ ಕಾದಂಬರಿ ಎಂದು ಈಗಾಗಲೇ ವಿಮರ್ಶಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜತೆಗೆ ಸಾಹಿತ್ಯಾಭಿಮಾನಿಗಳಲ್ಲಿ ಕೂಡ ಸಾಕಷ್ಟು ಕುತೂಹಲ ಹುಟ್ಟಿಸಿ, ಎರಡನೇ ಮುದ್ರಣದತ್ತ ದಾಪುಗಾಲು ಹಾಕಿದೆ.
ಬೆಂಗಳೂರಿನ ಅಂಕಿತ ಪುಸ್ತಕ ಘಾಂದ್ರುಕ್ ಕಾದಂಬರಿಯನ್ನು ಪ್ರಕಟಿಸಿದೆ. ನವಕರ್ನಾಟಕ ಪಬ್ಲಿಕೇಷನ್ಸ್ ಮತ್ತು ಅಂಕಿತ ಪುಸ್ತಕ ಜಂಟಿಯಾಗಿ ಈ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಎಲ್ಲ ಸಾಹಿತ್ಯಾಸಕ್ತರೂ ಈ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಮೈಸೂರಿನ ನವಕರ್ನಾಟಕ ಮಳಿಗೆಯ ವ್ಯವಸ್ಥಾಪಕ ಎನ್.ಕೆ.ಸತ್ಯನಾರಾಯಣ ಅವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.