ಕಾಂಗ್ರೆಸ್‌ಗೆ ಮತ ನೀಡುವ ಮನವರಿಕೆ ಸಭೆ

vote
Published on

ಮೈಸೂರು: ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಏ.11ರಂದು ಸಂಜೆ 4 ಗಂಟೆಗೆ ನಗರದ ರೈಲ್ವೆ ನಿಲ್ದಾಣ ಬಳಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ವಿಭಾಗದ ಆಶ್ರಯದಲ್ಲಿ ಮೈಸೂರು- ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿ ಪರ ಮತ ನೀಡಿಕೆ ಬಗ್ಗೆ ಮನವರಿಕೆ ಮಾಡಿಕೊಡುವ ಸಭೆ ಆಯೋಜಿಸಲಾಗಿದೆ ಎಂದು ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್, ಶಾಸಕ ಹರೀಶ್‌ಗೌಡ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಹಿಂದುಳಿದ, ಅತಿ ಹಿಂದುಳಿದ ಹಾಗೂ ಅವಕಾಶ ವಂಚಿತ ಸಮುದಾಯಗಳು, ಅಲೆಮಾರಿ ಸಮುದಾಯಗಳ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜಾತಿ ಗಣತಿ ವರದಿ ಸಿದ್ಧಪಡಿಸಿ ಅದನ್ನು ಸ್ವೀಕರಿಸಿರುವುದು ಸಹ ಸಿಎಂ ಸಿದ್ದರಾಮಯ್ಯ ಅವರೇ ಆಗಿದ್ದಾರೆ. ಅತಿ ಹಿಂದುಳಿದ ವರ್ಗಗಳ ಪರ ಸದಾ ಕಾಂಗ್ರೆಸ್ ಇದೆ. ಈ ವರ್ಗಗಳ ಕೇವಲ ಕಾಂಗ್ರೆಸ್‌ನಿಂದಷ್ಟೇ ಮುಖ್ಯವಾಹಿನಿಗೆ ಬರಬಹುದಾಗಿದೆ. ಹೀಗಾಗಿ ಈ ಬಗ್ಗೆ ಸಭೆಯಲ್ಲಿ ಅರಿವು ಮೂಡಿಸಲಾಗುವುದೆಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net