ಚುನಾವಣೆಗೂ ಮುನ್ನ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್​ ಸ್ಪೋಟ; ಬಾಲಕಿಗೆ ಗಂಭೀರ ಗಾಯ

Cooker Blast
Published on

ರಾಮನಗರ: ಮನೆಯಲ್ಲಿ ಅಡುಗೆ ಮಾಡುವ ವೇಳೆ ಕುಕ್ಕರ್ ಸಿಡಿದ ಬಾಲಕಿಯೋರ್ವಳಿಗೆ ಗಂಭೀರ ಗಾಯವಾಗಿರುವ ರಾಮನಗರ ತಾಲ್ಲೂಕಿನ ಕೂನಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗಾಯಗೊಂಡಿರುವ ಮಹಾಲಕ್ಷ್ಮೀ(17)ಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನು ಬಾಲಕಿ ಎಂದಿನಂತೆ ಶುಕ್ರವಾರ ಬೆಳಗ್ಗೆ ಅನ್ನ ಮಾಡಲು ಕುಕ್ಕರ್ ಇಟ್ಟಿದ್ದಾಳೆ. ಈ ವೇಳೆ ಅಡುಗೆ ಮನೆಯಲ್ಲಿ ಬಾಲಕಿ ಬೇರೆ ಕೆಲಸ ಮಾಡುತ್ತಿದ್ದ ವೇಳೆ ಕುಕ್ಕರ್​ ಏಕಾಏಕಿ ಸ್ಪೋಟವಾಗಿದೆ.

injured
ಗಾಯಗೊಂಡಿರುವ ಬಾಲಕಿ

ಸ್ಪೋಟದ ರಭಸಕ್ಕೆ ಮುಖದ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು ತಕ್ಷಣವೇ ಬಾಲಕಿಯನ್ನು ರಾಮನಗರ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಚಿಕಿತ್ಸೆ ಬಳಿಕ ವೈದ್ಯರು ಔಷಧಿಗಳನ್ನು ನೀಡಿ ಗಾಯಾಳುವನ್ನು ವಾಪಸ್​ ಮೆನೆಗೆ ಕಳುಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿಧಾನಸಭೆ ಚುನಾವಣೆ ಸಂದರ್ಬದಲ್ಲಿ ಮಾಗಡಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಒಬ್ಬರು ವಿತರಿಸಿದ್ದ ಕಳಪಙಎ ಗುಣಮಟ್ಟದ ಕುಕ್ಕರ್​ ಎಂದು ಆರೋಪಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net