

ಹಾವೇರಿ: ಅಡುಗೆ ಮಾಡುತ್ತಿದ್ದ ಮಹಿಳೆಗೆ ಒಲೆಗೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತಾಲೂಕಿನ ಕೋಳೂರ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಗಂಗವ್ವ ಮಾರುತೆಪ್ಪ ಕಾಮಣಿ (53) ಮೃತ ಮಹಿಳೆ.
ಇವರು ಮನೆಯಲ್ಲಿ ಅಡುಗೆ ಮಾಡುತ್ತಿದ್ದ ಸಮಯದಲ್ಲಿ ಒಲೆಯ ಬೆಂಕಿಯ ಕಿಡಿ ಹಾರಿ ಸೀರೆಗೆ ಬೆಂಕಿ ತಗುಲಿದೆ. ಇದರಿಂದ ಗಂಭೀರವಾಗಿ ಸುಟ್ಟು ಮೃತಪಟ್ಟಿದ್ದಾಳೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.