

ಚಿತ್ರದುರ್ಗ: ಕಳೆದ 9 ವರ್ಷಗಳಿಂದ ಬಂಡವಾಳಶಾಹಿಗಳ ಪರ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಾಗ ಬಡವರು, ಮಧ್ಯಮ ವರ್ಗದವರ ಮೇಲೆ ಅನುಕಂಪ ಉಕ್ಕಿ ಹರಿಯುತ್ತದೆ ಎಂದು ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ವ್ಯಂಗ್ಯವಾಡಿದ್ದಾರೆ.
ಅಡುಗೆ ಅನಿಲ ದರ ಕಡಿತಗೊಳಿಸಿರುವ ಕೇಂದ್ರದ ನಿರ್ಧಾರ ಗಿಮಿಕ್ ಆಗಿದೆ. ನೈಜಕಾಳಜಿ ಇದ್ದರೆ ಬಡ, ಮಧ್ಯಮ ವರ್ಗದವರಿಗೆ ಅಡುಗೆ ಅನಿಲ, ರೈಲು ಪ್ರಯಾಣ ಉಚಿತಗೊಳಿಸಲಿ ಹಾಗೂ ಡಿಸೇಲ್ ದರ ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 4 ಗ್ಯಾರಂಟಿಗಳನ್ನು ಈಡೇರಿಸಿದೆ. ಲೋಕಸಭಾ ಚುನಾವಣೆಯಲ್ಲೂ ಜನ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.