ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ

cooparative
Published on

ಮಡಿಕೇರಿ:

ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಆಂತರಿಕ ಗುಣಮಟ್ಟ ಭರವಸೆ ಕೋಶ, ಅರ್ಥಶಾಸ್ತç ವಿಭಾಗದ ಸಂಯುಕ್ತ ಆಶ್ರಯದಲ್ಲಿ ಯುವ ಜನತೆಗೆ ಸಹಕಾರಿ ಕ್ಷೇತ್ರದ ಅರಿವು ಕಾರ್ಯಕ್ರಮ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲ ಡಾ. ಕೆ.ಸಿ. ದಯಾನಂದ ಉದ್ಘಾಟಿಸಿದರು.

ನಂತರ ಮಾತನಾಡಿ, ಸಹಕಾರಿ ಕ್ಷೇತ್ರ ಬಹಳ ಮುಖ್ಯವಾದ ಒಂದು ಆರ್ಥಿಕ ಕ್ಷೇತ್ರವಾಗಿದೆ. ಭಾರತದಲ್ಲಿ ಸಹಕಾರಿ ಕ್ಷೇತ್ರ ಬಹಳ ಆಳವಾಗಿ ಬೆಳೆದಿದೆ. ಜಗತ್ತಿನ ಎಲ್ಲಾ ರಾಷ್ಟçಗಳು ಆರ್ಥಿಕ ಹಿಂಜರಿಕೆಯಿAದ ಸಂಕಷ್ಟ ಅನುಭವಿಸಿದರೂ, ಸಹಕಾರಿ ಕ್ಷೇತ್ರ ಬಹಳ ಪ್ರಬಲವಾಗಿರುವುದರಿಂದ ಅದರ ಪರಿಣಾಮ ಭಾರತದ ಮೇಲೆ ಅಷ್ಟೊಂದು ಉಂಟಾಗಲಿಲ್ಲ ಎಂದು ಹೇಳಿದರು.

ಕೊಡಗು ಜಿಲ್ಲಾ ಸಹಕಾರಿ ತರಬೇತಿ ಸಂಸ್ಥೆ ಪ್ರಾಂಶುಪಾಲರಾದ ಡಾ. ಆರ್.ಎಸ್. ರೇಣುಕಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸಹಕಾರಿ ಕ್ಷೇತ್ರದ ಮೂಲ ತತ್ವಗಳು, ಸಹಕಾರಿ ಸಂಘಗಳ ಕಾರ್ಯ ಚಟುವಟಿಕೆ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸಹಕಾರಿ ವಿಷಯದ ಮಹತ್ವ ಮತ್ತು ಸಹಕಾರಿ ಕ್ಷೇತ್ರದಲ್ಲಿ ಅವಕಾಶವಿರುವ ವಿವಿಧ ಉದ್ಯೋಗ ಅವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು.

ಸಹಕಾರಿ ತರಬೇತಿ ಸಂಸ್ಥೆಯ ಉಪನ್ಯಾಸಕರಾದ ಸಂಜೀವ, ಆಂತರಿಕ ಗುಣಮಟ್ಟ ಭರವಸಾ ಕೋಶದ ಸಹ ಸಂಚಾಲಕ ಡಾ.ಬಸವರಾಜು, ವಾಣಿಜ್ಯ ಶಾಸ್ತç ವಿಭಾಗದ ಮುಖ್ಯಸ್ಥೆ ಪಿ.ಟಿ. ದಮಯಂತಿ, ಅರ್ಥಶಾಸ್ತç ವಿಭಾಗದ ಉಪನ್ಯಾಸಕಿ ಕೆ.ಎಂ. ವೀಣಾ, ಬಿ.ವಿ. ಗೀತಾ, ನಿಶಾನ್ ಜೋಷೆಫ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net