

ಮಾನ್ವಿ: ಕನ್ನಡ ನಾಡು, ನುಡಿ, ಜಲ ಕುರಿತು ಜನಜಾಗೃತಿಗೆ ಸಾಹಿತ್ಯ ಸಮ್ಮೇಳನದಂತಹ ಕಾರ್ಯಕ್ರಮಗಳು ಅಗತ್ಯ ಎಂದು ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಭಾನುವಾರ ಫೆ.27ರಂದು ನಡೆಯಲಿರುವ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು. ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಾಹಿತಿಗಳು, ಕನ್ನಡ ಪರ ಸಂಘಟನೆಗಳು, ರಾಜಕೀಯ ಮುಖಂಡರು, ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಹಂಪಯ್ಯ ನಾಯಕ, ಕಸಾಪ ತಾಲೂಕು ಅಧ್ಯಕ್ಷ ರವಿಕುಮಾರ ಪಾಟೀಲ್ ವಕೀಲರು, ಗೌರವ ಕಾರ್ಯದರ್ಶಿ ಬಸವರಾಜ ಜಂಗಮರಹಳ್ಳಿ, ಸಂಘಟನಾ ಕಾರ್ಯದರ್ಶಿ ಬಸವರಾಜ, ಪರಿಷತ್ತಿನ ಪರಿಶಿಷ್ಟ ಜಾತಿ ಪ್ರತಿನಿಧಿ ಲಕ್ಷ್ಮಣರಾಯ್ ಕಪಗಲ್, ಕಾರ್ಯಕಾರಿ ಸಮಿತಿ ಸದಸ್ಯರಾದ ಬಸವರಾಜ ಕನ್ನಾರಿ, ಹರ್ಷವರ್ಧನ್, ಗುರುರಾಜ ಕುಲಕರ್ಣಿ ಕೊಟ್ನೆಕಲ್, ಬಸವರಾಜ ಪಾಟೀಲ್, ರಾಘವೇಂದ್ರ ಜಾನೇಕಲ್ ವಕೀಲರು ಇತರರಿದ್ದರು.