

ಹೆಬ್ರಿ: ಮಹನೀಯರ ಜಯಂತಿ ಆಚರಣೆ ಮಾಡಲು ಎಲ್ಲರ ಸಹಕಾರ ಅಗತ್ಯ ಎಂದು ತಹಸೀಲ್ದಾರ್ ಎಸ್.ಎ.ಪ್ರಸಾದ್ ಹೇಳಿದರು. ಹೆಬ್ರಿ ತಾಲೂಕು ಕಚೇರಿಯಲ್ಲಿ ಗುರುವಾರ ಹೆಬ್ರಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ಹಾಗೂ ಡಾ.ಬಾಬು ಜಗಜೀವನ ರಾಂ ಅವರ 118ನೇ ಜನ್ಮದಿನ ಆಚರಣೆ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಕಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬಿ.ನಾಯ್ಕ, ಆರೋಗ್ಯ ಇಲಾಖೆ ಚಿದಾನಂದ, ಶಿಕ್ಷಣ ದಿವಾಕರ್ ಮರಕಾಲ, ಹೆಬ್ರಿ ತಾಲೂಕು ಪಂಚಾಯಿತಿ ಅಧಿಕಾರಿ ಮಹೇಶ್, ಹೆಬ್ರಿ ಪಿಡಿಒ ಸದಾಶಿವ ಸೇರ್ವೆಗಾರ್, ಅರಣ್ಯ ಇಲಾಖೆ ಮಂಜುಳಾ ಉಪಸ್ಥಿತರಿದ್ದರು.