

ಮದ್ದೂರು: ಗ್ರಾಮೀಣ ಶಾಲೆಗಳಲ್ಲಿನ ಮೂಲ ಸೌಕರ್ಯಕ್ಕೆ ರೋಟರಿ ಸಂಸ್ಥೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುತ್ತಿದೆ ಎಂದು ರೋಟರಿ ಸಂಸ್ಥೆ ಅಧ್ಯಕ್ಷ ಚನ್ನಂಕೇಗೌಡ ತಿಳಿಸಿದರು.
ರೋಟರಿ ಮದ್ದೂರು ಮತ್ತು ರೋಟರಿ ಬೆಂಗಳೂರು ಸೆಂಟ್ರಲ್ ಸಹಯೋಗದಲ್ಲಿ ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸೋಮವಾರ 15 ಡೆಸ್ಕ್‌ಗಳನ್ನು ಉಚಿತವಾಗಿ ವಿತರಿಸಿ ಮಾತನಾಡಿದರು.
ಗ್ರಾಮೀಣ ಶಾಲೆಗಳಲ್ಲಿ ಮಕ್ಕಳ ಕಲಿಕಾ ಮಟ್ಟವನ್ನು ಹೆಚ್ಚಿಸಲು ಇಂಗ್ಲಿಷ್ ಕಲಿಕಾ ತರಬೇತಿ, ನಾಯಕತ್ವ ಗುಣ ಹೆಚ್ಚಿಸುವ ತರಬೇತಿಗಳನ್ನು ಪ್ರತಿ ವರ್ಷ ಶಾಲೆಗಳಲ್ಲಿ ಆಯೋಜಿಸಲಗುತ್ತಿದೆ. ಮುಂದೆಯೂ ಕೂಡ ಗ್ರಾಮೀಣ ಶಾಲೆಗಳ ಸಮಗ್ರ ಅಭಿವೃದ್ಧಿಗೆ ರೋಟರಿ ಸಂಸ್ಥೆ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ರೋಟರಿ ಸಂಸ್ಥೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು, ಸಮಾಜದ ಕಟ್ಟ ಕಡೆಯ ವ್ಯಕಿಗೂ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹಲವಾರು ಕಾರ್ಯಕ್ರಮ ರೂಪಿಸುತ್ತಿದೆ. ಮುಂದೆಯೂ ಮತ್ತಷ್ಟು ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರೋಟರಿ ಬೆಂಗಳೂರು ಸೆಂಟ್ರಲ್ ಅಧ್ಯಕ್ಷ ಲಿಂಗರಾಜು, ಮಾಜಿ ಅಧ್ಯಕ್ಷ ಸುರೇಶ್ ಹುಲಿ, ತಾಲೂಕು ಕಾರ್ಯದರ್ಶಿ ಲೋಕೇಶ್, ಮಾಜಿ ಅಧ್ಯಕ್ಷ ಶಶಿಗೌಡ, ಸದಸ್ಯರಾದ ಶಿವಕುಮಾರ್, ಪ್ರವೀಣ್, ಎಸ್‌ಡಿಎಂಸಿ ಅಧ್ಯಕ್ಷ ಸ್ವಾಮಿ, ಮುಖ್ಯ ಶಿಕ್ಷಕ ವೆಂಕಟೇಶ್ ಇತರರಿದ್ದರು.