ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸಹಕಾರ

Logo release
Published on

ಹಿರೇಕೆರೂರ: ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಪಟ್ಟಣದಲ್ಲಿ ನಡೆಯುತ್ತಿರುವುದು ತಾಲೂಕಿನ ಕನ್ನಡಾಭಿಮಾನಿಗಳಿಗೆ ಹೆಮ್ಮೆಯ ವಿಷಯ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ಹಾವೇರಿ ಜಿಲ್ಲಾ 14ನೇ ಸಾಹಿತ್ಯ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಲೋಕದಲ್ಲಿ ಹೆಮ್ಮೆಪಡುವಂತ ಸರ್ವಜ್ಞ ಜನಿಸಿದ ನಾಡು. ಸಾಹಿತ್ಯ ಕ್ಷೇತ್ರಕ್ಕೆ ತಾಲೂಕಿನ ಕನ್ನಡ ಪ್ರೇಮಿಗಳು ಅಪಾರ ಕೊಡುಗೆ ನೀಡಿದ್ದಾರೆ. ತಾಲೂಕಿನ ಕನ್ನಡಪರ ಸಂಘಟನೆಗಳು, ಕನ್ನಡ ಭಾಷಾ ಪ್ರೇಮಿಗಳು, ವಿವಿಧ ಸಂಘಟನೆಗಳು ಹಾಗೂ ಯುವಕರು ಸಮ್ಮೇಳನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಸಮ್ಮೇಳನದ ಯಶಸ್ಸಿಗೆ ಎಲ್ಲ ಸಹಕಾರ ನೀಡಲಾಗುವುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಮಾತನಾಡಿ, ಸಮ್ಮೇಳನ ಕೇವಲ ಕಾರ್ಯಕ್ರಮವಾಗದೇ ಸಮಾಜಕ್ಕೆ ಉತ್ತಮ ಸಂದೇಶ ಸಾರುವಂತ ವೇದಿಕೆಯಾಗಬೇಕು ಎನ್ನುವುದೇ ನಮ್ಮ ಗುರಿಯಾಗಿದೆ ಎಂದರು.

ತಾಲೂಕು ಕಸಾಪ ಅಧ್ಯಕ್ಷ ಎನ್. ಸುರೇಶಕುಮಾರ ಮಾತನಾಡಿ, ಈ ಮೊದಲು ಜಿಲ್ಲಾ ಸಮ್ಮೇಳನವನ್ನು ಡಿ. 28, 29 ರಂದು ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಅವಧಿಯಲ್ಲಿ ತಾಲೂಕಿನ ಶಾಲೆಗಳ ಮಕ್ಕಳು ಮತ್ತು ಶಿಕ್ಷಕರು ಶೈಕ್ಷಣಿಕ ಪ್ರವಾಸದಲ್ಲಿ ತೊಡಗಿಕೊಂಡಿರುವ ಹಿನ್ನಲೆಯಲ್ಲಿ ಸಮ್ಮೇಳನದ ದಿನಾಂಕ ಮುಂದೂಡಲಾಗಿದ್ದು, ಸಮ್ಮೇಳನ 2025ನೇ ಜ. 10 ಮತ್ತು 11ರಂದು ನಡೆಸಲು ತೀರ್ವನಿಸಲಾಗಿದೆ ಎಂದರು.

ತಹಸೀಲ್ದಾರ್ ಎಚ್. ಪ್ರಭಾಕರಗೌಡ, ಕಸಾಪ ಗೌರಾವಾಧ್ಯಕ್ಷ ಮಹೇಂದ್ರ ಬಡಳ್ಳಿ, ಪ್ರಧಾನ ಕಾರ್ಯದರ್ಶಿ ಪಿ.ಎಸ್. ಸಾಲಿ, ರಟ್ಟಿಹಳ್ಳಿ ತಾಲೂಕು ಕಸಾಪ ಅಧ್ಯಕ್ಷ ರಾಘವೇಂದ್ರ ಅಗಸಿಬಾಗಿಲ, ಜಿ.ಪಿ. ಪ್ರಕಾಶಗೌಡ, ಜಿಲ್ಲಾ ಕರವೇ ಅಧ್ಯಕ್ಷ ಗಿರೀಶ ರ್ಬಾ, ಬಿ.ಎಸ್. ಸಣ್ಣಗೌಡರ, ಮಲ್ಲಿಕಾರ್ಜುನ ಬುರಡಿಕಟ್ಟಿ, ಅಶೋಕ ಗೊಲ್ಲರ, ರಾಮಣ್ಣ ತೆಂಬದ, ಪಿ.ಬಿ. ನಿಂಗನಗೌಡ್ರ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮೇಘರಾಜ ಮಾಳಗಿಮನಿ, ಎಂ.ಬಿ. ಕಾಗಿನೆಲ್ಲಿ, ಎಂ.ಎಂ. ಮತ್ತೂರ, ಮಂಜುನಾಥ ಕಳ್ಳಿಹಾಳ, ಡಾ.ಬಸವರಾಜ ಪೂಜಾರ, ಕೆ.ಡಿ. ದಿವಿಗಿಹಳ್ಳಿ, ಸಿ.ಬಿ. ಮಾಳಗಿ, ಎನ್.ಎಸ್. ಚಿಕ್ಕನರಗುಂದ, ಈರಣ್ಣ ಚಟ್ಟೂರ, ಬಿ.ವಿ. ಸೊರಟೂರ ಹಾಗೂ ತಾಲೂಕು ಕಸಾಪ ಸದಸ್ಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net