ಸಾಂಕ್ರಾಮಿಕ ರೋಗ ತಡೆಗೆ ಎಲ್ಲರ ಸಹಕಾರ ಅಗತ್ಯ

12blrp1
Published on

ಬೇಲೂರು: ಪುರಸಭೆ ವ್ಯಾಪ್ತಿಯಲ್ಲಿ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವುದೇ ನಮ್ಮ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ 23 ವಾರ್ಡ್‌ಗಳಲ್ಲೂ ಸೊಳ್ಳೆ ನಿಯಂತ್ರಣ ಔಷಧ ಸಿಂಪಡಿಸಲಾಗುತ್ತಿದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು.

ಬೇಲೂರು ಪುರಸಭೆ ವ್ಯಾಪ್ತಿಯಲ್ಲಿ ಡೆಂೆ, ಮಲೇರಿಯಾ, ಚಿಕೂನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುರಸಭೆಯಿಂದ ಪಟ್ಟಣದ ಸೊಳ್ಳೆ ನಿಯಂತ್ರಣ ಔಷಧ ಸಿಂಪಡಣೆ ಸಂದರ್ಭ 7ನೇ ವಾರ್ಡ್‌ನಲ್ಲಿ ಚಾಲನೆ ನೀಡಿ ಮಾತನಾಡಿದರು. ಸಾರ್ವಜನಿಕರು ಹಾಗೂ ನಿವಾಸಿಗಳು ತಮ್ಮ ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಬಳಸಿ ಬಿಟ್ಟ ಹಳೆಯ ವಸ್ತುಗಳನ್ನು ತಕ್ಷಣವೇ ವಿಲೇವಾರಿ ಮಾಡಬೇಕು. ಎಲ್ಲೂ ನೀರು ನಿಲ್ಲದಂತೆ ಎಚ್ಚರಿಕೆ ವಹಿಸುವುದು ಅಗತ್ಯ ಎಂದರು.

ಜ್ವರದ ಮುನ್ಸೂಚನೆ ಕಂಡು ಬಂದ ತಕ್ಷಣವೇ ಸಮೀಪದ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಾಮಿಕ ಆರೋಗ್ಯ ಕೆಂದ್ರಗಳಿಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಈಗಾಗಲೇ ಪುರಸಭೆಯಿಂದ ಕರಪತ್ರಗಳನ್ನು ಹಂಚಿ ಜನರಲ್ಲಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಅಲ್ಲದೆ ಪ್ರತಿಯೊಬ್ಬರೂ ಸ್ವಚ್ಛತೆಗೆ ಒತ್ತು ನೀಡಿ ತಮ್ಮ ತಮ್ಮ ಆರೋಗ್ಯದತ್ತ ಹೆಚ್ಚು ಗಮನ ಹರಿಸಬೇಕು. ನಿರ್ಲಕ್ಷೃ ಎಂದರು.

ಪುರಸಭೆ ಮುಖ್ಯಾಧಿಕಾರಿ ಎಸ್.ಡಿ.ಮಂಜುನಾಥ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಡೆಂೆ, ಮಲೇರಿಯಾ, ಚಿಕೂನ್‌ಗುನ್ಯಾದಂತಹ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ಇದರ ನಿಯಂತ್ರಣಕ್ಕಾಗಿ ಪುರಸಭೆಯಿಂದ ಎಲ್ಲ ಸಿದ್ಧತೆ ಕೈಗೊಳ್ಳಲಾಗಿದೆ. ಸಾರ್ವಜನಿಕರು ಸಹ ನಮ್ಮೊಂದಿಗೆ ಕೈಜೋಡಿಸಿದರೆ ಈ ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಗಟ್ಟಬಹುದು ಎಂದರು.

ಆರೋಗ್ಯಾಧಿಕಾರಿಗಳಾದ ಲೋಹಿತ್, ಜ್ಯೋತಿ, ಸಿಬ್ಬಂದಿ ಪೃಥ್ವಿ ಸಲ್ಮಾನ್, ವಾರ್ಡಿನ ನಿವಾಸಿಗಳಾದ ಯೋಗೇಶ್, ಈಶ್ವರ್, ಉಷಾ ಇತರರು ಇದ್ದರು.

ಪಟ್ಟಣದಲ್ಲಿ ಸಾಂಕ್ರಾಮಿಕ ರೋಗಗಳು ತಡೆಗಟ್ಟಲು ಸೊಳ್ಳೆ ನಿಯಂತ್ರಣಕ್ಕೆ ಔಷಧ ಸಿಂಪಡಣೆ ಕಾರ್ಯವನ್ನು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ವೀಕ್ಷಿಸಿದರು. ಲೋಹಿತ್, ಜ್ಯೋತಿ, ಪೃಥ್ವಿ ಸಲ್ಮಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net